ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ 75ಕ್ಕೂ ಹೆಚ್ಚಿನ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿ ಘಟಕದ ಅಧ್ಯಕ್ಷ ಡಿ.ಸಿ. ನಾಯಕ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಆನಂದ್ ಬಾಬು, ನಗರಘಟಕದ ಅಧ್ಯಕ್ಷ ಗಣೇಶ್ ಪ್ರಭು ಶೆಟ್ರು, ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಅಲ್ಲ ಭಕ್ಷಿ, ಕುಷ್ಟಗಿ ತಾಲೂಕು ಯುವ ಮುಖಂಡ ಮುತ್ತುರಾಜ್ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.