NEWSನಮ್ಮರಾಜ್ಯವಿಡಿಯೋ

ಕಪ್ಪುಪಟ್ಟಿ ಧರಿಸಿ ಸಾರಿಗೆ ನೌಕರರು ಸೇವೆಗೆ ಹಾಜರ್‌; ನಾಳೆ ಬೋಂಡ ಬಜ್ಜಿ ಮಾಡಿ ಹೋರಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಇಂದು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗುವ ಮೂಲಕ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿನೂತನ ಪ್ರತಿಭನೆ ಮಾಡುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೆ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ಏಪ್ರಿಲ್‌ 7ರಿಂದ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವುದು ಖಚಿತ ಎಂದು ನೌಕರರ ಕೂಟ ಹೇಳಿದೆ.

ಅದರದ ಅಂಗವಾಗಿ ಬುಧವಾರ (ಏ.1) ಎಲ್ಲಾ 4 ನಿಗಮಗಳ ಸಾರಿಗೆ ನೌಕರರು ಕೈಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಜರಾಗುವ ಮೂಲಕ ಏ.7ರಂದು ತಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ನೌಕರರನ್ನು 6ನೇ ವೇತನ ಆಯೋಗದಡಿ ತರಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರಿಗೆ ಸಚಿವರು ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಾವುದೇ ತೀರ್ಮಾನ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ನಮ್ಮ ಎಲ್ಲಾ ಸಾರಿಗೆ ನೌಕರರ ತೋಳಿಗೆ ಕಪ್ಪುಪಟ್ಟಿ ಧರಿಸಿ ಸೇವೆ ಹಾಜರಾಗಿದ್ದಾರೆ.

ಅದರಂತೆ ನಾಳೆ (ಏ.2) ರಸ್ತೆ ಮತ್ತು ಕೆಲವು ಬಸ್‌ ನಿಲ್ದಾಣಗಳಲ್ಲಿ ವಡೆ, ಬೋಂಡ ಮಾಡುವ ಮೂಲಕ ಎರಡನೇ ದಿನದ ಪ್ರತಿಭಟನೇ ದಿನವು ಪ್ರತಿಭಟನಾ ಎಚ್ಚರಿಕೆ ನೀಡಲಿದ್ದಾರೆ. ಹೀಗೆ ಏ.1ರಿಂದ 6ರವರೆಗೆ ಒಂದು ರೀತಿಯ ಎಚ್ಚರಿಕಾ ಸಂದೇಶದ ಪ್ರತಿಭಟನಾ ಹೋರಾಟ ಮಾಡಲಿದ್ದು ಏ.7ರಿಂದ ಬಸ್‌ಬಂದ್‌ ಮಾಡಿ ಸತ್ಯಾಗ್ರಹ ಮಾಡುವ ಮೂಲಕ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಕಳೆದ ಡಿಸೆಂಬರ್ ನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಸಾರಿಗೆ ನೌಕರರು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಗಳನ್ನು ಇಟ್ಟಿದ್ದರು. ಈ ವೇಳೆ ರಾಜ್ಯ ಸರ್ಕಾರ ಸರ್ಕಾರಿ ನೌಕರನಾಗಿ ಮಾಡುವ ಬೇಡಿಕೆ ಬಿಟ್ಟು ಉಳಿದ ಒಂಬತ್ತು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು.

ಜೊತೆಗೆ 6ನೇ ವೇತನ ಆಯೋಗ ಜಾರಿ ಭರವಸೆ ನೀಡಲಾಗಿತ್ತು. ಆದರೆ, ತಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಷ್ಕರದ ನಂತರವೂ ಹಲವು ಬಾರಿ ಮನವಿ ಕೊಟ್ಟರು ಸರ್ಕಾರ ಸ್ಪಂದಿಸದಿರುವ ಕಾರಣ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ