NEWSನಮ್ಮಜಿಲ್ಲೆರಾಜಕೀಯ

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 23 ಕೊನೆಯ ದಿನ: ಕೆ.ಶ್ರೀನಿವಾಸ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರಜೆ ದಿನಗಳನ್ನು ಹೊರತುಪಡಿಸಿ, 2021ರ ನವೆಂಬರ್ 16 ರಿಂದ ನವೆಂಬರ್ 23ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿದ್ದು, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿ ಅಥವಾ ಸಹಾಯಕ ಚುನಾವಣಾ ಅಧಿಕಾರಿಯವರಿಗೆ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

2021ರ ನವೆಂಬರ್ 24ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಹಾಗೂ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು 2021ರ ನವೆಂಬರ್ 26ರ ಮಧ್ಯಾಹ್ನ 3 ಗಂಟೆ ಕೊನೆಯ ದಿನವಾಗಿದೆ.

2021ರ ಡಿಸೆಂಬರ್ 10ರ ಬೆಳಿಗ್ಗೆ 8 ಗಂಟೆಯಿಂದ 4 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದರ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಧಳೀಯ ಸಂಸ್ಧೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ