Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಮಹಿಳೆಯರಿಗೆ ಕಸವಿಲೇವಾರಿ ವಾಹನ ಚಾಲನೆ ತರಬೇತಿಗೆ ಮಹಮ್ಮದ ರೋಷನ್ ಚಾಲನೆ

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಧೈರ್ಯದಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಮಹಿಳೆಯರು ವಾಹನ ಚಾಲನೆ ತರಬೇತಿಪಡೆದು ಘನತ್ಯಾಜ್ಯ ಕಸವಿಲೇವಾರಿ ವಾಹನಗಳ ಚಾಲಕರಾಗಿ ಕಾರ್ಯನಿರ್ವಹಿಸುವುದರ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಕರೆ ನೀಡಿದರು.

ದೇವಗಿರಿಯಲ್ಲಿರುವ ಬರೊಡಾಗ್ರಾಮೀಣ ಸ್ವಉದ್ಯೋಗತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಘನತ್ಯಾಜ್ಯ ಕಸವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಾವೇರಿ ಜಿಲ್ಲೆಯಲ್ಲಿ ವಿನೂತನವಾದ ಪ್ರಯೋಗವನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಘನತ್ಯಾಜ್ಯ ಕಸವಿಲೇವಾರಿ ವಾಹನಗಳ ಚಾಲನೆಗೆ ಮಹಿಳೆಯರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಪ್ರಥಮ ಭಾರಿಗೆ ಘನತ್ಯಾಜ್ಯ ಕಸ ವಿಲೇವಾರಿಕಾರ್ಯ ಕೈಗೊಳ್ಳಲ್ಲು 30 ದಿನಗಳ ಲಘುವಾಹನ ತರಬೇತಿಯನ್ನು ಬರೊಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಆಯೋಜಿಸಲಾಗಿದೆ ಎಂದರು.

ಮಹಿಳೆಯರು ವಾಹನಾ ಚಾಲನಾ ತರಬೇತಿಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು. ಮಹಿಳಾ ಚಾಲಕರಾಗಿ ವಾಹನ ಚಾಲನೆ ಜೊತೆಗೆ ಗ್ರಾಮೀಣ ಸ್ವಚ್ಛತೆಯ ಕಾರ್ಯಕ್ಕೆ ಕೈಜೋಡಿಸಬೇಕು. ಈ ಕೆಲಸದಿಂದ ತಾವು ಆರ್ಥಿಕವಾಗಿ ಸಬಲರಾಗಬಹುದು. ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಬಹುದು. ಮಹಿಳೆಯರು ಪ್ರತಿ ಹಂತದಲ್ಲೂ ಧೈರ್ಯದಿಂದ ಮುನ್ನಡೆದರೆ ನಿಶ್ಚಿತವಾಗಿಯೂ ಯಶಸ್ಸು ಹೊಂದಲು ಸಾಧ್ಯ ಎಂದು ಹೇಳಿದರು.

ವೆಬ್‍ಸಿಟಿ ತರಬೇತಿ ಸಂಸ್ಥೆಯ ನಿರ್ದೇಶಕ ಎಸ್.ಸಜೀತ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಸೀಮಬಾಬಾ ಮುದ್ದೆಬಿಹಾಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಜೆ.ಕೊರವರ, ಪರಶುರಾಮ ಪೂಜಾರ, ಜಿಲ್ಲಾ ಯೋಜನಾ ನಿರ್ದೇಶಕ ನಾಗರಾಜ ಬಾರ್ಕಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ