NEWSನಮ್ಮಜಿಲ್ಲೆ

ಬಿಬಿಎಂಪಿ ಮ್ಯಾನುಯಲ್ ಸ್ಕ್ಯಾವೆಂಜರ್ಸ್‌ಗೆ ಕಾಯಂ ವೃತ್ತಿಪರ ವ್ಯವಸ್ಥೆ ಮಾಡಿ: ಡಾ. ಪಿ.ಪಿ.ವಾವ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳು ಯಾವುದೇ ಉದ್ಯೋಗ ವಿಲ್ಲದೆ ನಿರಾಶ್ರಿತರಾಗಿದ್ದು, ಅವರ ಜೀವನೋಪಾಯಕ್ಕಾಗಿ ನಗರದಲ್ಲಿ ಹಾಲಿನ ಬೂತ್, ಹಾಪ್ ಕಾಮ್ಸ್ ಸೇರಿದಂತೆ ಮತ್ತಿತರ ವ್ಯವಸ್ಥೆಯನ್ನು ಕಾಯಂ ವೃತ್ತಿಪರ ವ್ಯವಸ್ಥೆ ಮಾಡಿಕೊಡುವ ಸಲುವಾಗಿ ಪಾಲಿಸಿ ರಚಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ. ಪಿ.ಪಿ.ವಾವ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದಂತೆ ಆಯೋಗದ ಸದಸ್ಯರು ಇಂದು ಹೊಸ ಕುಮಾರ ಕೃಪಾ ಅತಿಥಿಗೃಹ ಸಭಾ ಕೊಠಡಿಯಲ್ಲಿ ಸಭೆ ನಡೆಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳು ಒಳಚರಂಡಿ/ಮಲವಿಸರ್ಜನೆ ಗುಂಡಿಗಳಲ್ಲಿ ಇಳಿಯಬಾರದೆಂದು‌ ಕೇಂದ್ರ ಸರ್ಕಾರ ನಿಷೇಧವೇರಿದಂತೆ. ಈ ಸಂಬಂಧ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳಾಗಿ ಜೀವನ‌ ನಡೆಸುತ್ತಿದ್ದವರ ಜೀವನೋಪಾಯಕ್ಕಾಗಿ ಸರ್ಕಾರದ ವತಿಯಿಂದ ಈ ವ್ಯವಸ್ಥೆ ಮಾಡಬೇಕು ಎಂದರು.

ಮುಖ್ಯ ಆಯುಕ್ತ ಗೌರವ್ ಗುಪ್ತ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 17,000 ನೇರ ವೇತನದಡಿ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಕಾಯಂ ಪೌರಕಾರ್ಮಿಕರನ್ನು ಹೊರತು ಪಡಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆಯಿಂದ ನೇರ ವೇತನ ವ್ಯವಸ್ಥೆಯಡಿ ತಿಂಗಳ 7ನೇ ತಾರೀಖಿನ ವೇಳೆಗೆ ವೇತನವನ್ನು ನೀಡಲಾಗುತ್ತಿದೆ.

ಅಲ್ಲದೆ ಎಲ್ಲಾ ಪೌರಕಾರ್ಮಿಕರಿಗೂ ಒಂದೇ ರೀತಿಯ ಸಮವಸ್ತ್ರವನ್ನು ನೀಡಲಾಗಿದ್ದು, ಸುರಕ್ಷಾ ಸಾಮಗ್ರಿಗಳನ್ನು ನೀಡಲಾಗುತ್ತದೆ. ಜೊತೆಗೆ ಪೌರಕಾರ್ಮಿಕರ ಕಾಲೋನಿಗಳಲ್ಲಿ ಆಗಿಂದಾಗ್ಗೆ ಸೋಂಕುನಿವಾರಕ ಸಿಂಪಡಣೆ ಹಾಗೂ ಮೂರು ತಿಂಗಳಿಗೊಮ್ಮೆ ಹೆಲ್ತ್ ಕ್ಯಾಂಪ್‌ ಮಾಡಲಾಗುವುದು. ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಕೆಲಸದ ಅವಧಿಯಲ್ಲಿ ಮೃತಪಟ್ಟವರಿಗೆ ಅವರ ಅವಲಂಬಿತರಿಗೆ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತದೆ ಎಂದರು.

ಈ ವೇಳೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಮಾಜಿ ಸದಸ್ಯ ಜಗದೀಶ್ ಹಿರೇಮನಿ, ಮುಖ್ಯ ಆಯುಕ್ತರುಗೌರವ್ ಗುಪ್ತ, ವಿಶೇಷ ಆಯುಕ್ತರಾದ ಹರೀಶ್ ಕುಮಾರ್, ರವೀಂದ್ರ, ಜಂಟಿ ಆಯುಕ್ತರು(ಘನತ್ಯಾಜ್ಯ) ಸರ್ಫರಾಜ್ ಖಾನ್, ಅಧೀಕ್ಷಕ ಇಂಜಿನಿಯರ್(ಘನತ್ಯಾಜ್ಯ) ಬಸವರಾಜ್ ಕಬಾಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...