Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ಮೂರು ದಿನಗಳವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಇದಕ್ಕೂ ಮೊದಲು ಕೊರೊನಾ ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜೂ.14ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಈಗ ಮೂರು ದಿನಗಳ ಕಾಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೇ 29ರಿಂದ ಜೂ.7ರವರೆಗೆ ಸೋಮವಾರ ಮತ್ತು ಗುರುವಾರ ಎರಡೂ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡುವ ಮೂಲಕ ಲಾಕ್‌ಡೌನ್ ಕಠಿಣಗೊಳಿಸಲಾಗಿತ್ತು.

ಈಗ ಮತ್ತೆ ಜೂ.14ರವರೆಗೂ ಲಾಕ್‌ಡೌನ್ ವಿಸ್ತರಣೆ ಆಗಿದ್ದು, ಜೂ.7ರಿಂದ 14ರ ವರೆಗೆ ಸೋಮವಾರ, ಬುಧವಾರ, ಶುಕ್ರವಾರ ಮೂರು ದಿನ ಅಗತ್ಯ ವಸ್ತು ಮತ್ತು ದಿನಸಿ ಮಾರಾಟಕ್ಕೆ ಅವಕಾಶ ನೀಡಿದೆ. ಈ ಮೂರು ದಿನಗಳಲ್ಲಿ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ