ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ ಎಂದು ತಿಳಿಸಿದ್ದಾರೆ.
ನಾನು ಒಬ್ಬ ಬಿಜೆಪಿ ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಪಕ್ಷವನ್ನು ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ. ಜತೆಗೆ ಮುಂದಿನ ದಿನಗಳಲ್ಲಿ ಪಕ್ಷದ, ಕ್ಷೇತ್ರದ ಒಳಿತಿಗೆ ಕೆಲಸ ಮಾಡೋಣ ಎಂದು ಕಾರ್ಯಕರ್ತರಿಗೆ ಧೈರ್ಯತುಂಬಿದ್ದಾರೆ.