Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆರಾಜಕೀಯ

ಬಿಬಿಎಂಪಿ ಮುಖ್ಯ ಆಯುಕ್ತರಿಂದ ಕೋವಿಡ್ ಪರಿಸ್ಥಿತಿ ಕುರಿತ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಮತ್ತಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಟೆಸ್ಟಿಂಗ್ ಹಾಗೂ ಕಾಂಟ್ಯಾಕ್ಟ್ ಟ್ರೇಸಿಂಗ್ ಕಾರ್ಯವನ್ನು ಹೆಚ್ಚಿಸಲು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಯಲು ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಈ ಪೈಕಿ ಹೆಚ್ಚು ಕೋವಿಡ್ ಸೋಂಕು ಕಂಡುಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕೋವಿಡ್ ನಿಯಂತ್ರಿಸಬೇಕು ಎಂದರು.

ಕೋವಿಡ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವ ಕಡೆ ದಂಡ ವಿಧಿಸಬೇಕು. ಮದುವೆ ಹಾಗೂ ಇನ್ನಿತರೆ ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಸೂಚನೆ ನೀಡಬೇಕು. ಕೋವಿಡ್ ಸೋಂಕು ಹೆಚ್ಚಿರುವ ಕ್ಲಸ್ಟರ್‌ಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಟೆಸ್ಟಿಂಗ್, ಟ್ರೇಸಿಂಗ್ ಹಾಗೂ ವ್ಯಾಕ್ಸಿನೇಷನ್ ಕಾರ್ಯ ಸರಿಯಾಗಿ ಮಾಡಬೇಕು ಎಂದು ಹೇಳಿದರು.

ವಿಶೇಷ ಆಯುಕ್ತ ಡಿ.ರಂದೀಪ್ ಮಾತನಾಡಿ, ನಗರದಲ್ಲಿ ಪ್ರತಿನಿತ್ಯ ಸರಾಸರಿ 400 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ ಹೆಚ್ಚು ಕಂಡುಬರುತ್ತಿರುವ ಪ್ರದೇಶದಲ್ಲಿ ಹೆಚ್ಚು ಟೆಸ್ಟಿಂಗ್ ಮಾಡಲಾಗುತ್ತಿದೆ. ಜತೆಗೆ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವಲಯ ಆಯುಕ್ತರು ರವೀಂದ್ರ, ಎಲ್ಲಾ ವಲಯ ಜಂಟಿ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ ಡಾ.ವಿಜೇಂದ್ರ, ವಲಯ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪೆಟ್ರೋಲ್, ಡೀಸೆಲ್‌, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನತಾ ಪಕ್ಷ ಪ್ರತಿಭಟನೆ

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ