NEWSನಮ್ಮಜಿಲ್ಲೆರಾಜಕೀಯ

650 ಕೋಟಿ ರೂ.ಮೌಲ್ಯದ 24.33 ಎಕರೆ ಸರ್ಕಾರಿ ಜಮೀನು ಕಬಳಿಕೆಗೆ ಸಚಿವ ಅರವಿಂದ ಲಿಂಬಾವಳಿ ಹುನ್ನಾರ: ಎಎಪಿ ಆರೋಪ

ಮಾ. 21 ಕ್ಕೆ ಸ್ಥಳೀಯರ ಜೊತೆಗೂಡಿ ಕೆರೆ ಅಂಗಳದಲ್ಲಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಹತ್ತಿರದಲ್ಲಿ ಇರುವ ವರ್ತೂರು ಹೋಬಳಿಯ ಜುನ್ನಸಂದ್ರದ 650 ಕೋಟಿ ರೂ.ಮೌಲ್ಯದ 24.33 ಎಕರೆ ಸರ್ಕಾರಿ ಜಮೀನು ನುಂಗಲು ಸ್ಥಳೀಯ ಶಾಸಕ, ಸಚಿವ ಅರವಿಂದ ಲಿಂಬಾವಳಿ ಹುನ್ನಾರ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆರೋಪಿಸಿದ್ದಾರೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯರಾದ, ಜೋಡಿದಾರರಾಗಿದ್ದ ನಾರಾಯಣ ರೆಡ್ಡಿ ಕುಟುಂಬದವರೊಂದಿಗೆ ಸೇರಿಕೊಂಡು ಸುಮಾರು 650 ಕೋಟಿ ರೂ. ಮೌಲ್ಯದ ಕೆರೆ ಜಮೀನನ್ನು ನುಂಗಲು ಸಚಿವ ಅರವಿಂದ ಲಿಂಬಾವಳಿ ಹೊರಟಿದ್ದಾರೆ ಎಂದರು.

2014 ರಲ್ಲಿ ಒತ್ತುವರಿದಾರ ನಾರಾಯಣ ರೆಡ್ಡಿ ಕುಟುಂಬದ ಕೈಯಿಂದ ಒತ್ತುವರಿ ತೆರವುಗೊಳಿಸಿದ ಮೇಲೂ ಕೇವಲ ಬೇಲಿ ಹಾಕಿ ಬಿಡಲಾಗಿದೆ ಹೊರತು ಮತ್ತೇನೂ ಮಾಡಿಲ್ಲ. ಈ ಕೆರೆ ಅಭಿವೃದ್ಧಿ ಮಾಡಿದರೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನು ಕೈ ತಪ್ಪುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಅವರು ಕೆರೆ ಅಭಿವೃದ್ಧಿ ತಡೆಯುತ್ತಿದ್ದಾರೆ ಎಂದು ಆಪಾದಿಸಿದರು.

ಬಿಡಿಎ ಅಧೀನದಲ್ಲಿ ಇರುವ ಈ ಕೆರೆ ಈಗ ಹಾಳು ಕೊಂಪೆಯಾಗಿದೆ. ರಾತ್ರೋ ರಾತ್ರಿ ಬಂದು ತ್ಯಾಜ್ಯ ಸುರಿಯಲಾಗುತ್ತಿದೆ. ಒಳಚರಂಡಿ ನೀರು ಬಿಟ್ಟಿರುವ ಕಾರಣ ಹಂದಿ, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ. ಅಲ್ಲದೇ ಅಂತರ್ಜಲ ಸಾಕಷ್ಟು ಕಲುಷಿತಗೊಂಡಿದ್ದು ಜನರು ಇದೇ ನೀರನ್ನು ಉಪಯೋಗಿಸುತ್ತಿದ್ದಾರೆ. ಇದೆಲ್ಲವೂ ಸಚಿವರ ಬೆಂಬಲದೊಂದಿಗೆ ನಡೆಯುತ್ತಿದೆ. ಇದುವರೆಗೂ ಕೆರೆ ಅಭಿವೃದ್ದಿಗೆ ಎಂದು ನೀಡಿದ ಅನುದಾನವನ್ನು ನುಂಗಿ ನೀರು ಕುಡಿಯಲಾಗಿದೆ ಎಂದರು.

ಈ ಕೆರೆ ಅಭಿವೃದ್ಧಿಗೆ ಸಾಕಷ್ಟು ಬಾರಿ ಹಣ ಬಿಡುಗಡೆಯಾಗಿದ್ದರೂ ಈ ಸ್ಥಿತಿಯಲ್ಲಿ ಇರಲು ಕಾರಣ ಸಚಿವ ಅರವಿಂದ ಲಿಂಬಾವಳಿ. ಸುಮಾರು 650 ಕೋಟಿ ಮೌಲ್ಯದ ಈ ಭೂಮಿಯನ್ನು ಮಾರಾಟ ಮಾಡುವ ಷಡ್ಯಂತ್ರ ಎಂದು ಕಿಡಿ ಕಾರಿದರು.

ನಾರಾಯಣ ರೆಡ್ಡಿ ಕುಟುಂಬದವರು ಈಗಲೂ ಈ ಭೂಮಿ ತಮಗೆ ಸೇರಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು. ಈ ದಾವೆಯನ್ನು ಸಹ ಗ್ರಾಮಸ್ಥರೇ ಮುನ್ನಡೆಸುತ್ತಿದ್ದಾರೆ. ಬಿಬಿಎಂಪಿಯು ಸಚಿವರ ಒತ್ತಡಕ್ಕೆ ಒಳಗಾಗಿ ಪ್ರಕರಣ ಮುಂದುವರೆಸುತ್ತಿಲ್ಲ ಎಂದು ಆರೋಪಿಸಿದರು.

ಬೆಳ್ಳಂದೂರು ವಾರ್ಡ್ ಅಧ್ಯಕ್ಷ ಅಶೋಕ್ ಮೃತ್ಯುಂಜಯ ಮಾತನಾಡಿ, ಜುನ್ನಸಂದ್ರ ಕೆರೆ ಉಳಿವಿಗಾಗಿ ಸ್ಥಳೀಯ ಜನರ ಸಹಕಾರದೊಂದಿಗೆ ಮಾರ್ಚ್ 21ರ (ಭಾನುವಾರ) ಬೆಳಿಗ್ಗೆ ಕೆರೆ ಅಂಗಳದಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಗ್ರಾಮಸ್ಥರಾದ ಚೆಲುವರಾಜು ಉಪಸ್ಥಿತರಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್