NEWSನಮ್ಮಜಿಲ್ಲೆ

ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಅಜಯಸಿಂಗ ಚಾಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ದಿ. ಮಲ್ಲಿಕಾರ್ಜುನ ಬಿರಾದಾರ ಅವರ ಪ್ರಥಮ ಪುಣ್ಯ ಸ್ಮರಣೋತ್ಸದ ಅಂಗವಾಗಿ ಇಂದು ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ಶಿಬಿರ ಮತ್ತು ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜೇವರ್ಗಿ ಶಾಸಕ ಹಾಗೂ ವಿಪಕ್ಷ ಮುಖ್ಯ ಸಚೇತಕ ಡಾ.ಅಜಯಸಿಂಗ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದಿ. ಮಲ್ಲಿಕಾರ್ಜುನ ಬಿರಾದಾರ ಅವರು ನಮ್ಮ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು.ಅವರ ಪುಣ್ಯ ಸ್ಮರಣೋತ್ಸದ ನಿಮಿತ ಅವರ ಪರಿವಾರದವರು ಇತರ ಸಾಮಾಜಿಕ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಸೊನ್ನದ ಶ್ರೀ ಡಾ.ಶಿವಾನಂದ ಮಹಾಸ್ವಾಮಿಗಳು ವಹಿಸಿದ್ದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಶಿವಕುಮಾರ ಗುಂದಗಿ ಮಾಜಿ ಅಧ್ಯಕ್ಷರು ಅಗ್ರೋ ಕಾರ್ನ ನಿಗಮ ಮಂಡಳಿ ಬೆಂಗಳೂರು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಪಾಟೀಲ, ಕಾಂಗ್ರೆಸ ಪಕ್ಷದ ನಾಯಕರಾದ ರಾಜಶೇಖರ ಸಾಹು ಸೇರಿ ಡಿಎಸ್ ಪಕ್ಷದ ಯುವ ನಾಯಕ ವಿಜಯಕುಮಾರ ಹಿರೇಮಠ.

ತಾಲೂಕು ವೈದ್ಯಾಧಿಕಾರಿ ಡಾ.ಸಿದ್ದು ಪಾಟೀಲ. ಮಾಜಿ ತಾಲೂಕು ಸದಸ್ಯ ಗೀರೆಪ್ಪಗೌಡ ಪಾಟೀಲ, ಮಾಜಿ ಪಿಕಾರ್ಡ ಬ್ಯಾಂಕ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಸಕರೆಪ್ಪಗೌಡ ಪಾಟೀಲ, ನೀಲಕಂಠ ಅವಟಿ, ನಾಸಿರಖಾನ ನಾಡಗೌಡ ಸೇರಿದಂತೆ ಬಿರಾದಾರ ಪರಿವಾರದ ಸದಸ್ಯರು, ಸೊನ್ನ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ