CrimeNEWSನಮ್ಮಜಿಲ್ಲೆ

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈಲು ಸಮೀಪಕ್ಹಕೆ ಬರುವಷ್ಟರಲ್ಲಿ ಹಳಿ ದಾಟಬಹುದು ಎಂಬ ಹಳಿ  ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಇಬ್ಬರೂ ಮೃತಪಟ್ಟಿರುವುದು ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಭದ್ರಪ್ಪ ಲೇಔಟ್​ನಲ್ಲಿ ಈ ಅವಘಡ ಸಂಭವಿಸಿದ್ದು, ಬಿಡದಿ ಮೂಲದ 50 ವರ್ಷದ ಮಂಗಳಾ ಹಾಗೂ 30 ವರ್ಷದ ಹರೀಶ್ ಸಾವನ್ನಪ್ಪಿದ್ದಾರೆ.

ಇಬ್ಬರೂ ಸಮೀಪದ ಸಂಜಯನಗರದ ದೊಡ್ಡ ಬೈಲದಕೆರೆ ನಿವಾಸಿಗಳು ಎಂದು ತಿಳಿದುಬಂದಿದ್ದು, ಮೃತರು ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು. ಮೃತ ಹರೀಶ್ ಅಂಗವಿಕಲರಾಗಿದ್ದು, ವ್ಯಾಪಾರ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದ್ದು, ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರೈಲು ಹಳಿ ದಾಟುತ್ತಿದ್ದಾಗ ಹಿಂದಿನಿಂದ ಬಂದ ರೈಲು ಅವರಿಗೆ ಅಪ್ಪಳಿಸಿದೆ. ರೈಲು ಆಗಮನದ ಬಗ್ಗೆ ರೈಲಿನ ಲೋಕೋ ಪೈಲಟ್ ಹಾರ್ನ್ ಮಾಡಿದರೂ ಹಳಿಯಲ್ಲಿದ್ದ ಅವರು ಸಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...