CrimeNEWSನಮ್ಮಜಿಲ್ಲೆ

ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊಲೆಪಾತಕಿ ಕಾಲಿಗೆ ಗುಂಡು ಹೊಡೆದು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹನುಮಗಿರಿ ಬೆಟ್ಟದಲ್ಲಿ ಇಂದು ಮುಂಜಾಣೆ ಘಟನೆ ನಡೆದಿದ್ದು ಪೊಲೀಸ್ ಇನ್ಸ್ಪೆಕ್ಟರ್ ಜನಾರ್ಧನ ಹಾರಿಸಿದ ಗುಂಡಿನಿಂದ ಕೊಲೆ ಆರೋಪಿ ಧನುಷ್ ಗಾಯಗೊಂಡಿದ್ದಾನೆ. ಕೊಲೆ ಪ್ರಕರಣದಲ್ಲಿ ಧನುಷ್ ಪ್ರಮುಖ ಆರೋಪಿಯಾಗಿದ್ದ. ಹೀಗಾಗಿ ಪೊಲೀಸರು ಆತನ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದರು.

ಮಾರ್ಚ್ 24ರಂದು ಇಟ್ಟಮಡು ಮುಖ್ಯರಸ್ತೆಯಲ್ಲಿ ಮಂಜ ಅಲಿಯಾಸ್‌ ದಡಿಯ ಮಂಜು ಎಂಬ ರೌಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಈತನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು.

ಶುಕ್ರವಾರ ತಡರಾತ್ರಿ ಹನುಮಗಿರಿ ಬೆಟ್ಟದಲ್ಲಿ ಆರೋಪಿ ಧನುಷ್‌ ಇರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು. ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸುವ ವೇಳೆ ಕಾನ್‌ಸ್ಟೆಬಲ್‌ ಒಬ್ಬರ ಮೇಳೆ ದಾಳಿ ನಡೆಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸ್ ಇನ್ಸ್ಪೆಕ್ಟರ್‌ ಜನಾರ್ಧನ್ ಗುಂಡು ಹಾರಿಸಿದ್ದಾರೆ.

ಪಾತಕಿ ಧನುಷ್‌ ಬಲಗಾಲಿಗೆ ಪೆಟ್ಟು ಬಿದ್ದಿದ್ದು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ