Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ರಾಜಧಾನಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಪತ್ನಿಯೇ ಸುಪಾರಿ ಕೊಟ್ಟ ಶಂಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಾವಲ್​ಭೈರಸಂದ್ರದ ಅಂಬೇಡ್ಕರ್ ಕಾಲೇಜು ಬಳಿ ಬರ್ಬರವಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೃಷ್ಣಮೂರ್ತಿ(30) ಕೊಲೆಯಾದವರು ಎಂದು ಗುರುತಿಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ನಿರ್ದಯವಾಗಿ ಕೊಲೆ ಮಾಡಲಾಗಿದೆ. ಟೈಲ್ಸ್​ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ ಮೊದಲ ಹೆಂಡತಿಯನ್ನು ತೊರೆದು ಮತ್ತೊಂದು ಮದುವೆಯಾಗಿದ್ದ. ಆದರೆ, ಮದ್ಯದ ಅಮಲಲ್ಲಿ ಎರಡನೇ ಹೆಂಡತಿಯ ಜತೆಗೂ ಕಿರಿಕಿರಿ ಮಾಡಿಕೊಂಡಿದ್ದ.

ನಿತ್ಯವೂ ಮದ್ಯ ಸೇವಿಸಿ ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಎರಡನೇ ಹೆಂಡತಿಯೇ ಕೊಲೆ ಮಾಡಿಸಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕೃಷ್ಣಮೂರ್ತಿ, ಎರಡನೇ ಹೆಂಡತಿ ಜತೆಗೆ ಅಷ್ಟೇನು ಉತ್ತಮ ಸಂಬಂಧ ಹೊಂದಿರಲಿಲ್ಲ.

ಎರಡು ತಿಂಗಳಿನಿಂದ ಇಬ್ಬರ ನಡುವೆ ಪ್ರತಿನಿತ್ಯ ಗಲಾಟೆಗಳಾಗುತ್ತಿದ್ದವು. ಎಷ್ಟೋ ಬಾರಿ ಗಲಾಟೆ ತಾರಕಕ್ಕೆ ಹೋಗುತ್ತಿದ್ದ ಕಾರಣ ಎರಡು, ಮೂರು ಸಲ ಇಬ್ಬರಿಗೂ ಪೊಲೀಸರೇ ಎಚ್ಚರಿಕೆ ನೀಡಿದ್ದರು. ಆದರೂ, ಮನೆ ಬಳಿ ಗಲಾಟೆ ಆಗುತ್ತಿತ್ತು. ಇದರಿಂದಾಗಿ ಬೇಸತ್ತ ಆಕೆಯೇ ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂದು ಅನುಮಾನಿಸಲಾಗುತ್ತಿದೆ.

2-3 ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಡಿ.ಜೆ.ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...