CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ- ಹಣಕಾಸಿನ ವಿಚಾರದಲ್ಲಿ ಜಗಳ: ಅಡಿಕೆ ವ್ಯಾಪಾರಿ ಕೊಲೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಇಬ್ಬರು ಅಡಿಕೆ ವ್ಯಾಪಾರಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಒಬ್ಬರ ಕೊಲೆಯಲ್ಲಿ ಅಂತ್ಯ ವಾಗಿರುವ ಘಟನೆ ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಹ್ಯಾರೀಸ್ (52) ಕೊಲೆಯಾದ ವ್ಯಕ್ತಿ. ಈತ ಮೂಲತಃ ಮಡಿಕೇರಿ ತಾಲೂಕು ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳ ಹಿಂದೆ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ನಿವಾಸಿ ಅಮೀದ್ ಎಂಬುವವರನ್ನು ತನ್ನ ಬಳಿ ಅಡಿಕೆ ಕೆಲಸ ಮಾಡಲು ಪಿರಿಯಾಪಟ್ಟಣಕ್ಕೆ ಕರೆತಂದು ಒಟ್ಟಿಗೆ ಸೇರಿ ಅಡಿಕೆ ವ್ಯವಹಾರ ನಡೆಸುತ್ತಿದ್ದರು.

ನಂತರ ಕಳೆದ ಒಂದು ವರ್ಷದಿಂದ ಅಮೀದ್ ಹ್ಯಾರೀಸ್ ನಿಂದ ದೂರವಾಗಿ ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರೆ, ಹ್ಯಾರೀಶ್ ಪಿರಿಯಾಪಟ್ಟಣ ಟೌನ್‌ನ ಮಹದೇಶ್ವರ ಸ್ವಾಮಿ ರೈಸ್ ಮಿಲ್ ಆವರಣದಲ್ಲಿ ಬೇರೆಬೇರೆಯಾಗಿ ಅಡಿಕೆ ವ್ಯವಹಾರ ನಡೆಸುತ್ತಿದ್ದು ನಿನ್ನೆ ಕೇರಳಕ್ಕೆ ಹೋಗಿ ಬಂದು ವ್ಯವಹಾರದ ವಿಷಯವಾಗಿ ಚೌಡೇನಹಳ್ಳಿಯಲ್ಲಿ ಅಡಿಕೆ ಕೆಲಸ ಮಾಡುತ್ತಿದ್ದ ಅಮೀದ್ ಬಳಿ ಹೋಗಿದ್ದು ವ್ಯಾಪಾರದ ವಿಷಯದಲ್ಲಿ ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಮೀದ್, ಹ್ಯಾರೀಸ್ ಗೆ ಕತ್ತಿಯಿಂದ ಹೊಡೆದು ಕೊಲೆ ಮಾಡಿ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಹ್ಯಾರೀಸ್ ಮೃತ ದೇಹವನ್ನು ಕೊಡಗು ಜಿಲ್ಲೆಯ ಮಡಿಕೇರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಮೃತರ ಸಂಬಂಧಿಕರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...