ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುರುವಾರ ರೇಖಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕೊಲೆ ಬಳಿಕ ಆಟೋದಲ್ಲಿ ಎಸ್ಕೇಪ್ ಆಗಿದ್ದು, ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನ ಪತ್ತೆಗೆ ಬಲೆ ಬೀಸಲಾಗಿದೆ.
24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೊಲೀಸರಿಗೆ ತಾಕೀತು ಮಾಡಿದ್ದರು. ಇದೀಗ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ.