NEWSನಮ್ಮಜಿಲ್ಲೆರಾಜಕೀಯ

ಮೈಸೂರಿಗೆ ಕಳಂಕ ತರಲು ಯತ್ನಿಸಿದರು ಜನತೆಯ ಕ್ಷಮೆ ಕೇಳಲಿ: ಡಿಸಿ ರೋಹಿಣಿ ಸಿಂಧೂರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ನಮ್ಮ ಮೇಲೆ ಆರೋಪ ಮಾಡಲು ಹೋಗಿ ಮೈಸೂರಿಗೆ ಕಳಂಕ ತರಲು ಯತ್ನಿಸಿದರು. ಆದರೆ ನಾವು ಅದರಿಂದ ಮುಕ್ತರಾಗಿದ್ದೇವೆ. ಕಳಂಕ ತರಲು ಯತ್ನಿಸಿದವರು ಮೈಸೂರು ಜನತೆಯ ಕ್ಷಮೆ ಕೇಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಬಸವ ಜಯಂತಿ ಅಂಗವಾಗಿ ಇಂದು ನಗರದಲ್ಲಿ ಆಯೋಜಿಸಿದ್ದ ಸಮಾರಂಭಕ್ಕೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪೋರ್ಟ್ ನೋಡಿದ್ದೀರಾ? ನಾವು ಬಂದ ದಿನದಿಂದ ಕೆಲವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿಲ್ಲ, ಅದು ನನ್ನ ಕೆಲಸವೂ ಅಲ್ಲ. ನಮ್ಮ ಮೇಲೆ ಮಾಡಿದ ಆರೋಪ ಸುಳ್ಳು ಮತ್ತು ಆಧಾರ ರಹಿತ. ಸರ್ಕಾರ ಕೇಳಿದ ಎಲ್ಲ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.

ಕಳೆದ 7 ತಿಂಗಳಿಂದ ನನ್ನ ಮೇಲೆ ವೈಯಕ್ತಿಕವಾಗಿಯೂ ಆರೋಪ ಮಾಡುತ್ತಿದ್ದಾರೆ. ಚಾಮರಾಜನಗರ ಘಟನೆಯಲ್ಲೂ ಅದನ್ನೇ ಮಾಡಿದ್ದಾರೆ. ನಾವು ಸರ್ವಿಸ್ ಗೆ ಸೇರಿದ್ದೇ ದೇಶ ಸೇವೆ ಮಾಡಲು. ಈ ಸಣ್ಣ ಪುಟ್ಟ ಆರೋಪಗಳಿಗೆ ಉತ್ತರ ನೀಡುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ. ಈ ವಿಚಾರದಲ್ಲಿ ನನ್ನ ಮೇಲೆ ಆರೋಪ ಮಾಡಲು ಹೋಗಿ ಮೈಸೂರಿಗೆ ಕಳಂಕ ತಂದಿದ್ದಾರೆ ಎಂದು ಹೇಳಿದರು.

ಮಾಜಿ ಕಾರ್ಪೋರೇಟರ್, ಶಾಸಕರ ಟೀಕೆಗಳಿಗೆ ಪ್ರತಿಕ್ರಿಯೆ ಕೇಳಬೇಡಿ, ಪ್ರತಿಯೊಂದಕ್ಕೂ ಉತ್ತರ ಕೊಡುತ್ತಾ ಕೂರುವ ಸಮಯವಲ್ಲ ಎಂದು ಜೆಡಿಎಸ್ ನಾಯಕರ ವಿರುದ್ಧ ಡಿಸಿ ತಿರುಗೇಟು ನೀಡಿದರು.

ಇಂತಹ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಜೀವ ರಕ್ಷಣೆ ಸಾಧ್ಯ. ಕಳಬೇಡ, ಕೊಲಬೇಡ ಎಂಬ ಬಸವಣ್ಣನ ವಚನವನ್ನು ಎಲ್ಲರೂ ಮಾರ್ಗಸೂಚಿಯಾಗಿ ಸ್ವೀಕರಿಸಬೇಕು. ನಾಡದೇವತೆ ಚಾಮುಂಡೇಶ್ವರಿ ಸ್ವಲ್ಪ ಕಷ್ಟ ಸಾಧ್ಯವಾದರೂ ಸದ್ಬುದ್ಧಿ ಕೊಡಲಿ ಎಂದು ಟಾಂಗ್ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು