ಮೈಸೂರು: ನೀರಿನಲ್ಲಿ ಈಜಲು ಹೋದ ಜಿಲ್ಲೆ ನಾಲ್ವರು ಬಾಲಕರು ಸೇರಿ 6 ಮಂದಿ ನೀರುಪಾಲು
6 people death
ವಿಜಯಪಥ ಸಮಗ್ರ ಸುದ್ದಿ
ಮೈಸೂರು/ ಮಂಡ್ಯ: ಎರಡು ಪ್ರತ್ಯಕೆ ಪ್ರಕರಗಳಲ್ಲಿ ಈಜಲು ಹೋಗಿದ್ದು ನಾಲ್ವರು ಬಾಲಕರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟ ತಾಲೂಕಿನಲ್ಲಿ ಸಂಭವಿಸಿದೆ.
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಗುರುವಾರ ಮಂಧ್ಯಾಹ್ನ ಸಂಭವಿಸಿದೆ.
ಗ್ರಾಮದ ರಾಜು ಎಂಬುವರ ಮಗ ಯಶವಂತ್ ಕುಮಾರ್ (15) ಮಂಚಯ್ಯ ಎಂಬುವರ ಮಗ ಮಹದೇವಪ್ರಸಾದ್ (14) ಮಲ್ಲಿಕಾರ್ಜುನ ಎಂಬುವರ ಪುತ್ರ ಆಕಾಶ್ (15) ಮತ್ತು ನಿಂಗರಾಜು ಎಂಬುವರ ಪುತ್ರ ಕಿಶೋರ್ (13) ಈಜಾಡಲು ಹೋಗಿದ್ದರು.
ಈಜಾಡುತ್ತಿದ್ದ ವೇಳೆ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಮತ್ತು ಪೊಲೀಸರ ದೌಡಾಯಿಸಿದ್ದು ಕಾರ್ಯಾಚರಣೆ ನಡೆಸಿದರು. ಈ ವೇಳೆ ಯಶವಂತ್ ಕುಮಾರ್ ಮಹದೇವಪ್ರಸಾದ್ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ.
ಸ್ಥಳದಲ್ಲಿ ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಸಮೀಪದ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋದವರು ನೀರುಪಾಲಾಗಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಜವರೇಗೌಡ (34), ಬಸವೇಗೌಡ (26) ಮೃತರು. ಒಬ್ಬನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಯುತ್ತಿದೆ.
ಇಬ್ಬರೂ ನೆಂಟರ ಮನೆಗೆ ಬಂದು ಕಾವೇರಿ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.