CrimeNEWSನಮ್ಮಜಿಲ್ಲೆ

ಮೈಸೂರು: ದರೋಡೆ ಮಾಡಲು ಹೋಗಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದ ಕಾಮುಕರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದರಂತೆ ಕಾಮುಕರು.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿದ ಸತ್ಯಮಂಗಲದಲ್ಲಿ ಶನಿವಾರ ಬೆಳಗ್ಗೆ ಆರೋಪಿಗಳನ್ನು ಬಂಧಿಸಿ ಮೈಸೂರಿಗೆ ಕರೆತರಲಾಗಿದೆ.

ಆರೋಪಿಗಳಲ್ಲಿ ಮೂವರು ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದವರಾಗಿದ್ದಾರೆ. ರಸ್ತೆಗಳಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಗಳು ಇವರ ಮೇಲಿದೆ. ಅಂತೆಯೇ ಯುವಕ ಹಾಗೂ ಯುವತಿಯನ್ನೂ ದರೋಡೆ ಮಾಡಲು ತಂಡ ಹೋಗಿತ್ತು. ಇವರ ಬಳಿ ಏನೂ ಸಿಗದಕ್ಕೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.

ಸದ್ಯ ಐವರು ಆರೋಪಿಗಳನ್ನು ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವ ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ.

ಈ ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಹೀಗಾಗಿ ಇತ್ತ ಯುವಕ ಹಾಗೂ ಯುವತಿ ಮೂರು ದಿನಗಳು ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತತಿದೆ.

ಇನ್ನು ಈ ಪ್ರಕರಣ ನಡೆದ ಸಂದರ್ಭದಲ್ಲಿ ಈ ಸ್ಥಳಕ್ಕೆ ಅಪರಿಚಿತರು ಬರಲು ಸಾಧ್ಯವಿಲ್ಲ ಯಾರು ಪರಿಚಿತರು ಮಾತ್ರ ಬರಲು ಸಾಧ್ಯ ಎಂಬ ಮಾಹಿತಿ ಮೇರೆಗೆ ತನಿಖೆಗೆ ಪೊಲೀಸರು ಮುಂದಾಗಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು