ಮೈಸೂರು: ಕಳೆದ 37 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗೆ ನಗರಪಾಲಿಕೆಯ ಮೇಯರ್ ಪಟ್ಟ ಒಲಿದಿದೆ.
ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರಾ ಅವರು ನೂತನ ಮೇಯರ್ ಆಗಿ ಆಯ್ಕೆಯಾದರು. ಪ್ರಭಾರಿ ಮೇಯರ್ ಆಗಿದ್ದ ಆನ್ವರ್‌ಬ್ಹೇಗ್ ಉಪಮೇಯರ್ ಆಗಿ ಮುಂದುವರಿಯಲಿದ್ದಾರೆ.
ಇದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸವಿವ ಎಸ್.ಟಿ.ಸೋಮಶೇಖರ್ ಅವರು, ಮೈಸೂರಿನ ಮೇಯರ್ ಆಗಿ ಆಯ್ಕೆಗೊಂಡ ಸುನಂದಾ ಪಾಲನೇತ್ರ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.
ಇನ್ನು ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇವೆ ಎಂದು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
23ನೇ ಮಹಾಪೌರರಾಗಿ 59ನೇ ವಾರ್ಡಿನ ಸದಸ್ಯರಾದ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗುವ ಮೂಲಕ ನಗರಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಮಲವನ್ನು ಅರಳಿಸಿದ್ದು, ಈ ಮೂಲಕ ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಚುನಾವಣೆಯಲ್ಲಿ ಪರಾಜಿತರಾಗಿ ಕಣ್ಣೀರು ಹಾಕಿ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದ ಸುನಂದಾ ಪಾಲನೇತ್ರ ಅವರನ್ನು ಅಂದು ಸಿಎಂ ಆಗಿದ್ದ ಬಿಎಸ್‌ವೈ ಅವರು ಸಮಾಧಾನ ಪಡಿಸಿದ್ದರು.
ಅವರು ಅಂದು ಸಮಾಧಾನಪಡಿಸಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಿದ್ದರು. ಅಂದು ಅವರ ಕೊಟ್ಟ ಸಲಹೆಯಿಂದ ತಾಳ್ಮೆಕಾಯ್ದುಕೊಂಡ ಸುನಂದಾ ಅವರು ಇಂದು ಕೊನೆಗೂ 4ನೇ ಪ್ರಯತ್ನದಲ್ಲಿ ಯಶಸ್ವಿಯಾಗಿ ಬಹುವರ್ಷಗಳ ಕನಸನ್ನು ನನಸು ಮಾಡಿಕೊಂಡಿಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.