ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರಿನಲ್ಲಿ ಕೋವಿಡ್ ನಿರ್ವಹಣೆ ವಿಚಾರ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಹುದ್ದೆಗೆ ರಾಜೀನಾಮೆ ನೀಡಿದ ಬರನ್ನಲ್ಲೇ ಮೈಸೂರು ಪಾಲಿಕೆ ಸದಸ್ಯ ಲೋಕೇಶ್ ಜಿಲ್ಲಾಧಿಕಾರಿ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಒಬ್ಬ ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿಗೆ ತೊಂದರೆ ಕೊಡುವುದು ಸರಿಯಲ್ಲ. ಜಿಲ್ಲಾಧಿಕಾರಿ ಪಾಲಿಕೆ ಅಧಿಕಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಎಲ್ಲರಿಗೂ ಒಂದು ಸಹನೆ ಇರುತ್ತದೆ. ಪ್ರತಿದಿನ ನಮ್ಮ ಅಧಿಕಾರಿಗಳನ್ನು ಸಭೆ ಕರೆದು ಅವಮಾನ ಮಾಡಲಾಗುತ್ತಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಲೋಕೇಶ್ ಕಿಡಿಕಾರಿದರು.
ಜಿಲ್ಲಾಧಿಕಾರಿ ಶೋಮ್ಯಾನ್ ಇವರಿಂದ ಜಿಲ್ಲೆಗೆ ಯಾವುದೇ ಕೆಲಸವಾಗುತ್ತಿಲ್ಲ. ಜತೆಗೆ ಇವರು ಅಧಿಕಾರಿಗಳಿಗೆ ಕಿರುಕುಳಕೊಡುವುದನ್ನೇ ಕೆಲಸವಾಗಿಸಿಕೊಂಡಿದ್ದಾರೆ. ಎಲ್ಲೋ ಕುಳಿತುಕೊಂಡು ಕೆಲಸವಾಗಿದೆ ಎಂಬ ರೀತಿ ಬಿಂಬಿಸಿಕೊಳ್ಳಲು ಹೊರಟಿದ್ದಾರೆ. ಇದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಈ ಇಬ್ಬರು ಅಧಿಕಾರಿಗಳ ನಡುವೆ ಸಂಧಾನ ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಸಿಎಸ್ ಆಗಮಿಸಲಿದ್ದು ಇಂದು ಸಂಧಾನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.