ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರಿನಲ್ಲಿ ಕಳೆದ 8 ತಿಂಗಳಿಂದ ಉತ್ತಮ ಕೆಲಸ ಮಾಡಿದ್ದೇನೆ. ಹೀಗಾಗಿ ನಾನು ವರ್ಗಾವಣೆ ಆದೇಶವನ್ನು ನಿರೀಕ್ಷಿಸಿರಲಿಲ್ಲ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಿದ್ದೆ, ಕೋವಿಡ್ ತಗ್ಗುತ್ತಿರುವ ಈ ಸಮಯದಲ್ಲಿ ನನ್ನನ್ನು ಟ್ರಾನ್ಸ್ಫರ್ ಮಾಡಿರುವುದು ನಿಜಕ್ಕೂ ಅಚ್ಚರಿ ತಂದಿದೆ. ಕಳೆದ 1 ತಿಂಗಳಿಂದ ಯಾವೆಲ್ಲಾ ಶಾಸಕರು, ಸಂಸದರು, ಅಧಿಕಾರಿಗಳು ನನ್ನ ವಿರುದ್ಧ ಏನೆಲ್ಲ ಪಿತೂರಿ ಮಾಡಿದ್ದಾರೆಂಬುದು ಎಲ್ಲರ ಮುಂದೆಯೂ ಇದೆ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು.
ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜನತೆಗೆ ಧನ್ಯವಾದ ಹೇಳಿದ್ದಾರೆ. ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲಾ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಈ ವರ್ಗಾವಣೆ ಅರೀಕ್ಷಿತ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ಈ ವರ್ಗಾವಣೆ ಒಂದು ರೀತಿ ನೋವು ತಂದಿದೆ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ ಎಂದು ರೋಹಿಣಿ ಭಾವುಕರಾದರು.