Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆರಾಜಕೀಯ

ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡರ ನಗರಪಾಲಿಕೆ ಸದಸ್ಯತ್ವ ರದ್ದು: ಸುಪ್ರೀಂ ಮೊರೆ ಹೋಗಲು ಸಿದ್ಧತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮೇಯರ್ ಸ್ಥಾನಕ್ಕೆ ಕುತ್ತು ಬಂದಿದೆ. ಮಹಾನಗರಪಾಲಿಕೆ ಚುನಾವಣೆ ವೇಳೆ ಆಸ್ತಿ ಘೋಷಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ಮೇಯರ್ ರುಕ್ಮಿಣಿ ಮಾದೇಗೌಡ ಅವರ ನಗರಪಾಲಿಕೆ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಆದೇಶಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ವಾರ್ಡ್ ಸಂಖ್ಯೆ 36ರ ಸದಸ್ಯರಾಗಿರುವ ರುಕ್ಮಿಣಿ ಮಾದೇಗೌಡ ಅವರು ಕಳೆದ ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ರಜಿನಿ ಅಣ್ಣಯ್ಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಈ ಸಂಬಂಧ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಡಿಸೆಂಬರ್ 14, 2020ರಲ್ಲಿ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದು ಮಾಡಿ, ಅವರ ಬದಲಾಗಿ ರಜಿನಿ ಅಣ್ಣಯ್ಯ ಅವರನ್ನು ಸದಸ್ಯರೆಂದು ಘೋಷಿಸಲು ನ್ಯಾಯಾಲಯ ಆದೇಶ ನೀಡಿತ್ತು.

ಈ ವೇಳೆ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿ, ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ಇದೀಗ ಪ್ರಕರಣದ ವಿಚಾರಣೆ ನಡೆಸಿದ ಹೈ ಕೋರ್ಟ್‌ನ ನ್ಯಾಯಾಧೀಶರು ಚುನಾವಣೆ ವೇಳೆ ಆಸ್ತಿ ಘೋಷಣೆ ಕುರಿತಂತೆ ತಪ್ಪು ಮಾಹಿತಿ ನೀಡಿರುವ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವವನ್ನು ರದ್ದುಗೊಳಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದು, ಹೊಸದಾಗಿ ಚುನಾವಣೆ ನಡೆಸಿ ನೂತನ ಸದಸ್ಯರನ್ನು ಆಯ್ಕೆ ಮಾಡಬೇಕು ಎಂದು ಆದೇಶ ನೀಡಿದೆ.

ಈ ಎಲ್ಲದರ ನಡುವೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಫೆ.24 ರಂದು ರುಕ್ಮಿಣಿ ಮಾದೇಗೌಡ ಅವರು ಜಾ.ದಳ ಹಾಗೂ ಕಾಂಗ್ರೆಸ್ ವರಿಷ್ಠರ ನಿರ್ಧಾರದಂತೆ ಮೇಯರ್‌ ಆಗಿ ಆಯ್ಕೆಯಾದರು. ಮೇಯರ್‌ ಆದ ಮಾರನೇ ದಿನವೇ ರುಕ್ಮಿಣಿ ಅವರ ಸದಸ್ಯತ್ವ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿತ್ತು.

ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ
ರುಕ್ಮಿಣಿ ಮಾದೇಗೌಡ ಅವರು, ನ್ಯಾಯಾಲಯ ನನ್ನ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಸಂಬಂಧ ತೀರ್ಪಿನ ಪ್ರತಿ ಕೈ ಸೇರಿದ ನಂತರ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ರಜಿನಿ ಅಣ್ಣಯ್ಯಗೆ ನಿರಾಶೆ
ಈ ಹಿಂದೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪಿನಂತೆ ರಜನಿ ಅಣ್ಣಯ್ಯ ಅವರು ನಗರಪಾಲಿಕೆ ಸದಸ್ಯರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ, ಉಚ್ಚ ನ್ಯಾಯಾಲಯ ಹೊಸದಾಗಿ ಚುನಾವಣೆ ನಡೆಸುವಂತೆ ಆದೇಶಿಸಿರುವುದರಿಂದ ಅವರ ಆಸೆ ಈಡೇರದಂತಾಗಿದೆ.

ಮೇಯರ್ ಆಕಾಂಕ್ಷಿಗಳಿಂದ ಲಾಬಿ ಶುರು
ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಜಾ.ದಳದ ನಾಲ್ವರು ಆಕಾಂಕ್ಷಿಗಳು ಇದ್ದಾರೆ. ಪ್ರೇಮಾ ಶಂಕರೇಗೌಡ, ಅಶ್ವಿನಿ ಅನಂತು, ಭಾಗ್ಯ ಮಹದೇಶ್, ಲಕ್ಷ್ಮೀ ಶಿವಣ್ಣ ಮೇಯರ್ ರೇಸ್‌ನಲ್ಲಿದ್ದಾರೆ.

ಫೆ.24ರಂದು ನಡೆದಿದ್ದ ಮೇಯರ್ ಸ್ಥಾನದ ಚುನಾವಣೆಗೆ ಆರು ಮಂದಿ ಆಕಾಂಕ್ಷಿಗಳಿದ್ದರೂ, ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರುಕ್ಮಿಣಿ ಮಾದೇಗೌಡ ಅವರನ್ನು ಆಯ್ಕೆ ಮಾಡಿದ್ದರು. ಹೀಗಾಗಿ, ಜಾ.ದಳ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಮೇಯರ್‌ ಆಗಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ