NEWSನಮ್ಮಜಿಲ್ಲೆ

ನಮ್ಮ‌ ಮೆಟ್ರೋ: ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ನಮ್ಮ‌ ಮೆಟ್ರೋ 2ನೇ ಹಂತದಲ್ಲಿನ ನಾಗವಾರ-ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಹೈಕೋರ್ಟ್  ಮಂಗಳವಾರ ಅನುಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸೂರಜ್ ಗೋವಿಂದ್ ರಾಜ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಅನುಮತಿ ನೀಡಿತು. ತೆರವುಗೊಳಿಸುವ ಮರಗಳಿಗೆ ಪರ್ಯಾಯವಾಗಿ ನೆಡಲಾಗುವ ಸಸಿಗಳ (ಅರಣ್ಯೀಕರಣ) ವಿವರ ಒಳಗೊಂಡ ವರದಿ ನೀಡುವಂತೆಯೂ ಸೂಚಿಸಿತು.

ತಜ್ಞರ‌ ಸಮಿತಿ ಸಲಹೆಯಂತೆ ನಿಗಮವು ಮೆಟ್ರೋ ನಿರ್ಮಾಣಕ್ಕಾಗಿ ಈ ಮಾರ್ಗದಲ್ಲಿ ಮರಗಳನ್ನು‌ ಕಡಿಯಲು ಮತ್ತು ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಅಲ್ಲದೆ, 2021ರ ಮಾರ್ಚ್‌ನಿಂದ ಮೇ ತಿಂಗಳ ಅವಧಿಯಲ್ಲಿ ಈ ಕುರಿತು ಹಲವು ಅಧಿಸೂಚನೆಗಳನ್ನೂ ಹೊರಡಿಸಿತ್ತು.

ಮರಗಳನ್ನು ಸ್ಥಳಾಂತರಿಸುವ ವೇಳೆ ತಾನು ನೇಮಿಸಿದ ಅಧಿಕಾರಿ ಅಥವಾ ವೃಕ್ಷ ಅಧಿಕಾರಿಯು ಹಾಜರಿರಬೇಕು. ಮರಗಳ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದೂ ಪೀಠವು ನಿರ್ದೇಶಿಸಿತು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...