NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ: ಮುಷ್ಕರ ಹತ್ತಿಕ್ಕುವ ದಮನಕಾರಿ ಧೋರಣೆ ಕೈಬಿಡಬೇಕು: ಡಾ. ಯತೀಂದ್ರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ರೈತರ ಹೋರಾಟ ಹಾಗೂ ಕಾರ್ಮಿಕರು ಮುಷ್ಕರವನ್ನು ಹತ್ತಿಕ್ಕುವ ದಮನಕಾರಿ ಧೋರಣೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು. ಶೋಷಿತರು ಸೇರಿದಂತೆ ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುತ್ತಿರುವುದು ಸೂಕ್ತವಲ್ಲ ಎಂದು ವರುಣ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ಉದ್ಯಾನವನದಲ್ಲಿ ಬುಧವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೆ ಹೋರಾಟವನ್ನು ದಮನಗೊಳಿಸುವ ಕಾರ್ಯ ಆರಂಭವಾಯಿತು. ಹೋರಾಟಗಾರರನ್ನು ಬಂಧಿಸುವ ಮೂಲಕ ದೀನದಲಿತರ ಧ್ವನಿಯನ್ನು ಅಡಗಿಸುವ ಷಡ್ಯಎಂತರವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ದೇಶದ ನಾನಾ ರಾಜ್ಯಗಳ ಲಕ್ಷಾಂತರ ರೈತರು ಕೇಂದ್ರದ ವಿರುದ್ಧ ಹಲವು ತಿಂಗಳುಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸೌಜನ್ಯಕ್ಕೂ ಕೇಂದ್ರ ಸರ್ಕಾರ ಅವರನ್ನು ಮಾತುಕತೆಗೆ ಕರೆಯಲು ಸಿದ್ಧವಿಲ್ಲ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿದ್ದರೂ ಅಹವಾಲು ಕೇಳಬೇಕಾದ ರಾಜ್ಯಸರ್ಕಾರವೇ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ.

ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರು ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸಲು ಗಮನವನ್ನು ನೀಡಬೇಕು. ದೇಶದ ವ್ಯವಸ್ಥೆಯನ್ನು ಗಂಭೀರವಾಗಿ ಅರಿತಿದ್ದ ಅಂಬೇಡ್ಕರ್ ಅವರು ಬಲಿಷ್ಠವಾದ ಭಾರತವನ್ನು ಕಟ್ಟಲು ಅತ್ಯುತ್ತಮವಾದ ಸಂವಿಧಾನವನ್ನು ಬರೆದರು. ನಾಯಕರ ಜನ್ಮದಿನವನ್ನು ದೇಶದಲ್ಲಷ್ಟೇ ಅಲ್ಲ ಜಗತ್ತಿನಾದ್ಯಂತ ಆಚರಣೆ ಮಾಡುತ್ತಿರುವುದು ನಾವೆಲ್ಲರೂ ಕೊಡುವ ವಿಚಾರವಾಗಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಎನ್.ಸೋಮು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮುದ್ದೇಗೌಡ, ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಸಂಘಟನಾ ಸಂಚಾಲಕ ಸಿ.ಉಮಾ ಮಹದೇವ, ಯಡದೊರೆ ಮಹದೇವಯ್ಯ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಪುರಸಭೆ ಸದಸ್ಯರಾದ ಸಿ.ಪ್ರಕಾಶ್, ಆರ್.ಅರ್ಜುನ್, ಬಾದಾಮಿ ಮಂಜು, ಮುಖಂಡರಾದ ಕೊತ್ತೇಗಾಲ ಬಸವರಾಜು, ಪುಳ್ಳಾರಿ ಮಾದೇಶ, ಸೋಸಲೆ ಶಿವಣ್ಣ, ಯಡದೊರೆ ಸಿದ್ದರಾಜು, ಜಲ್ಲಿ ಮಹದೇವಸ್ವಾಮಿ ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ