NEWSನಮ್ಮಜಿಲ್ಲೆ

ಗ್ರಾಮಗಳ ಅಭಿವೃದ್ಧಿಗೆ ನರೇಗಾ ಸಹಕಾರಿ: ಪಿಡಿಒ ಡಾ.ಆಶಾ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಡಾ.ಆರ್.ಆಶಾ ತಿಳಿಸಿದರು.

ತಾಲೂಕಿನ ಮಾಲಂಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ನಡೆದ 2020-21 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ರೈತರು ಕೇಂದ್ರ ಸರ್ಕಾರದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಬೇಕು.

ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕೊಠಡಿ, ಕಾಂಪೌಂಡ್ ಗಳ ನಿರ್ಮಾಣ, ಆಟದ ಮೈದಾನ, ಬಯಲುರಂಗ ಮಂದಿರ, ರೈತರು ಒಕ್ಕಣೆ ಮಾಡಲು ರಾಶಿ ಕಣ, ಜಮೀನುಗಳಿಗೆ ತೆರಳಲು ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ ಎಂದರು.

ಜತೆಗೆ ದನದ ಕೊಟ್ಟಿಗೆ, ಕುರಿದೊಡ್ಡಿ ನಿರ್ಮಾಣ ಅಲ್ಲದೆ ಕೆರೆಗಳ ಹೂಳೆತ್ತುವುದು, ಶೌಚಾಲಯ, ಸ್ಮಶಾನ ಅಭಿವೃದ್ಧಿ, ಕೊಳವೆಬಾವಿ ಪಕ್ಕ ಇಂಗು ತೊಟ್ಟಿ, ಗ್ರಾಮೀಣ ಉದ್ಯಾನವನ, ಅಂಗನವಾಡಿ ಕೇಂದ್ರ ನಿರ್ಮಾಣ, ರೈತರಿಗಾಗಿ ಗೋದಾಮುಗಳು, ರಾಜೀವ್ ಗಾಂಧಿ ಸೇವಾ ಮಳಿಗೆ ನಿರ್ಮಾಣ ಕಾಮಗಾರಿಗಳಿದ್ದು, ಇವುಗಳಲ್ಲಿ ಗ್ರಾಮಕ್ಕೆ ಬೇಕಾಗಿರುವ ಯಾವುದೆ ಕೆಲಸಗಳನ್ನು ಉದ್ಯೋಗ ಖಾತರಿಯಲ್ಲಿ ಮಾಡಬಹುದು ಎಂದು ವಿವರಿಸಿದರು.

ಗ್ರಾ.ಪಂ.ಅಧ್ಯಕ್ಷ ಎಚ್.ಸಿ.ದೇವೇಂದ್ರ ಮಾತನಾಡಿ, ಮಾಲಂಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗಖಾತ್ರಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದ್ದು, ತೆರಿಗೆ ವಸುಲಾತಿಯನ್ನು ಮಾಡಿ ನಿಗದಿತ ಸಮಯಕ್ಕೆ ಬ್ಯಾಂಕಿಗೆ ಠೇವಣಿ ಇಡುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ, ಅಭಿವೃದ್ದಿಗೆ ಸಂಬಂಧಿಸಿದಂತೆ ಯಾವುದಾದರೂ ಲೋಪದೋಷಗಳು ಕಂಡುಬಂದಲ್ಲಿ ಅದನ್ನು ಸರಿಪಡಿಸಿಕೊಳ್ಳಲು ಈ ಜಮಾಬಂದಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.

ಮಾಜಿ ತಾ.ಪಂ.ಸದಸ್ಯ ಶ್ರೀನಿವಾಸ್ ಖಂಡ ಮಾತನಾಡಿ, ಗ್ರಾಮಸ್ಥರು ಹಾಗೂ ಸದಸ್ಯರ ಸಹಕಾರದಿಂದ ಉದ್ಯೋಗಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಕೆರೆಕಟ್ಟೆಗಳ ಊಳೆತ್ತುವುದು, ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ತಾಲ್ಲೂಕಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾ.ಪಂ. ಉಪಾಧ್ಯಕ್ಷೆ ಕಮಲಮ್ಮ, ಸದಸ್ಯರಾದ ಎಂ.ಎಸ್.ಹರೀಶ್, ಪುಟ್ಟರಾಜು, ಮಾದಯ್ಯ, ಅಭಿಲಾಷ, ವಸಂತ, ಉಮಬಾಯಿ, ಸಾಯಿದಬಾನು, ಸೈಯದ್ ಅಪ್ಜಲ್, ಮೀನಾಕ್ಷಿ, ಯಾಸ್ಮಿನ್ ತಾಜ್, ಪುವಿ, ಬಾನುಮತಿ, ಎಂ.ಎಸ್.ರವಿ ಮುಖಂಡರಾದ ದೊಡ್ಡಯ್ಯ, ಶೋಯೇಬ್ ಖಾನ್, ಬಿಲ್ ಕಲೆಕ್ಟರ್ ಬಲರಾಮ್ ಸಿಬ್ಬಂದಿಗಳಾದ ಉದಯಕುಮಾರ್, ನಾಗರಾಜು, ಮಂಜುನಾಥ, ಶಿವಾಜಿ, ನೇತ್ರಾವತಿ, ಹೆಚ್.ಎಸ್.ದಿವ್ಯಾ ಸೇರಿದಂತೆ ಗ್ರಾಮಸ್ಥರು ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...