CrimeNEWSನಮ್ಮಜಿಲ್ಲೆ

ನವಿಲೂರು: ಮೊದಲ ಪತ್ನಿ ಹತ್ಯೆಮಾಡಿ ಜೈಲು ಸೇರಿದ ಪಾತಕಿಯಿಂದ ಮತ್ತೆ ಗರ್ಭಿಣಿ ಪತ್ನಿ ಸೇರಿ ಮೂವರ ಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು : ಮೊದಲ ಪತ್ನಿಯನ್ನು ಹತ್ಯೆಮಾಡಿ ಜೈಲು ಸೇರಿದ ಪಾತಕಿಯೊಬ್ಬ ಹೊರಬಂದು ಮತ್ತೆ ಎರಡನೆಯ ಪತ್ನಿ ಗರ್ಭಿಣಿ ಸೇರಿ ಮೂವರನ್ನು ಕೊಲೆ ಮಾಡಿರುವ ಘಟನೆ  ತಾಲೂಕಿನ ನವಿಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಈರಯ್ಯ ಎಂಬಾತನೆ ಒಟ್ಟು ನಾಲ್ವರನ್ನು ಕೊಲೆ ಮಾಡಿದ ಆರೋಪಿ. ಇಬ್ಬರನ್ನು ಮದುವೆಯಾಗಿದ್ದ ಈ ಪಾಪಿ ಆ ಇಬ್ಬರೂ ಪತ್ನಿಯರನ್ನು ಕೊಲೆ ಮಾಡಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ಈತ ಮೊದಲು ಮದುವೆಯಾಗಿ ಆ ಪತ್ನಿಯ ಜತೆ ಜಗಳ ತೆಗೆದು ಕೊಲೆ ಮಾಡಿದ್ದ. ಈ ಕೃತ್ಯಕ್ಕೆ ಈರಯ್ಯನಿಗೆ ಜೈಲು ಶಿಕ್ಷೆಯಾಗಿ ಬಳಿಕ ಜೈಲಿನಿಂದ ಹೊರಬಂದು ಮಹದೇವಮ್ಮ ಎಂಬುವರನ್ನು ಎರಡನೇ ಮದುವೆಯಾಗಿದ್ದ. ಆಕೆ ಗರ್ಭಿಣಿಯಾಗಿದ್ದಳು.

ಮತ್ತೆ ಆಕೆಯೊಂದಿಗೂ ಜಗಳವಾಡಿ ಆಕೆಯ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ತಡೆಯಲು ಬಂದ ಅಕ್ಕಪಕ್ಕದ ಮನೆಯ ನಾಲ್ವರ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಈತನ ಕೃತ್ಯಕ್ಕೆ ಪತ್ನಿ ಮಹದೇವಮ್ಮ, ಎದುರು ಮನೆಯ ನಿಂಗಮ್ಮ(50) ಮತ್ತು ಮಾದಯ್ಯ(60) ಅವರು ಕೊಲೆಯಾಗಿದ್ದಾರೆ.

ಇನ್ನು ದಾಳಿಗೆ ಒಳಗಾಗಿರುವ ನಿಂಗಮ್ಮ ತಂದೆ, ತಾಯಿ ಹಾಗೂ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ