NEWSನಮ್ಮಜಿಲ್ಲೆರಾಜಕೀಯ

ಮೈಸೂರಿನ ಎನ್‌ಟಿಎಂ ಶಾಲೆ ತೆರವಿಗೆ ಸರ್ಕಾರ ಹುನ್ನಾರ ಆರೋಪ:  ಎಎಪಿ  ಪ್ರತಿಭಟನೆ   

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿವೇಕಾನಂದ ಸ್ಮಾರಕಕ್ಕೆ ಆಮ್ ಆದ್ಮಿ ಪಾರ್ಟಿಯ ವಿರೋಧವಿಲ್ಲ. ಆದರೆ ಐತಿಹಾಸಿಕ ಮಹತ್ವವುಳ್ಳ ಎನ್‌ಟಿಎಂ ಶಾಲೆ  ಕೆಡವುದಕ್ಕೆ ನಮ್ಮ ವಿರೋಧವಿದೆ ಎಂದು ಪಕ್ಷದ ಮೈಸೂರು ಜಿಲ್ಲಾ ಸಂಚಾಲಕಿ ಮಾಲವಿಕ ಗುಬ್ಬಿವಾಣಿ ತಿಳಿಸಿದ್ದಾರೆ.

ಶನಿವಾರ ನಗರದ ಎನ್‌ಟಿಎಂ ಶಾಲೆ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ  ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ವಿವೇಕಾನಂದ ಸ್ಮಾರಕವನ್ನು ಶಾಲೆಯ ಆವರಣದಲ್ಲಿರುವ ಮಿಕ್ಕ ಸ್ಥಳದಲ್ಲಿ ಕಟ್ಟಬಹುದು. ಯುವ ಸಭಾಂಗಣ ಬೇರೆ ಎಲ್ಲಿಯಾದರೂ ಕಟ್ಟಬಹುದು. ಅದನ್ನು ಬಿಟ್ಟು ಶಾಲೆ ಕೆಡವಿ ಸ್ಮಾರಕ ನಿರ್ಮಿಸಲು ಹೊರಟಿರುವುದ ಸರಿಯಲ್ಲ ಎಂದು ಹೇಳಿದರು.

ಇನ್ನು ಸಾಮಾಜಿಕ ಬದಲಾವಣೆ ಕೇವಲ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು ಸಭಾಂಗಣದಿಂದ ಆಗಿಲ್ಲ ಎಂದ ಅವರು, ಸರಕಾರ ಸರಕಾರಿ ಶಾಲೆಗಳನ್ನು ಸರಿಯಾಗಿ ನಡೆಸಲಾಗದೆ, ಬೇಕೆಂತಲೇ ಪರಿಸ್ಥಿತಿ ಬಿಗಡಾಯಿಸಲು ಬಿಟ್ಟು, ಶಾಲೆಯ ಅಮೂಲ್ಯ ಜಾಗವನ್ನು ಹಿತಾಸಕ್ತಿಗಳ ವಶವಾಗಲು ಬಿಟ್ಟಂತೆ ತೋರುತ್ತಿದೆ ಎಂದು ದೂರಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸುವುದು ಬೇಕಾದಷ್ಟು ಇರುವಾಗ ಶಾಲೆಗಳನ್ನು ಮುಚ್ಚುವುದು ತೀವ್ರ ಹಿನ್ನಡೆ. ಶಾಲೆಗಳನ್ನು ಮುಚ್ಚುವುದರಿಂದ ಸರಕಾರ ತನ್ನ ವೈಫಲ್ಯವನ್ನು ಒಪ್ಪಿಕೊಂಡಂತೆಯೇ ಸರಿ. ಹೊಸ ಶಾಲೆ ತೆರೆಯುವ ಮಾತಿರಲಿ, ಇರುವ ಶಾಲೆಗಳನ್ನು ಮುಚ್ಚುವುದರಲ್ಲಿ ಸರಕಾರ ತೋರುತ್ತಿರುವ ಉತ್ಸಾಹ ಬಿಜೆಪಿ ಸರಕಾರಕ್ಕೆ ಮಕ್ಕಳ ಶಿಕ್ಷಣ ಆದ್ಯತೆಯೂ ಅಲ್ಲ, ಅವಶ್ಯಕತೆಯೂ ಅಲ್ಲ ಎಂದು ಸಾರುವ ನೀತಿಯಾಗಿರುವುದು ದುರಾದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಐತಿಹಾಸಿಕ ಎನ್‌ಟಿಎಂ ಶಾಲೆಯನ್ನು ಕೆಡವುದರ ವಿರುದ್ಧ  ಪ್ರತಿಭಟಿಸುತ್ತಿದ್ದು ಮುಂದೆಯೂ ಸರಕಾರದ ಇಂತಹ ನೀತಿಯ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಪಕ್ಷದ ಆರ್‌.ಪ್ರಸಾದ್‌, ಮೊಹಮ್ಮದ್‌ ಇಸ್ಮೈಲ್‌, ಶಿವಕುಮಾರ್‌, ನಸ್ರೀನ್‌ ತಾಜ್‌, ಕೆ.ಎಂ.ಶಿವಕುಮಾರ್‌ ಮತ್ತು ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು