Breaking NewsCrimeNEWSನಮ್ಮಜಿಲ್ಲೆ

ಶುಶ್ರೂಷಕಿ ಸೇವೆ ಮಾಡಲು ಬಂದಾಕೆ ನಗದು ಚಿನ್ನ ಕದ್ದು ಪರಾರಿ: ಒಂದೇ ದಿನದಲ್ಲಿ ಅರೆಸ್ಟ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮನೆಗಳಿಗೆ ಹೋಗಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುವ ವೇಳೆ ಅದೇ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದನ್ನು ದೂಚಿ ಪರಾರಿಯಾಗಿದ್ದ ಹೋಂ ನರ್ಸ್‌ ಒಬ್ಬರನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಎನ್.ಆರ್.ಮೊಹಲ್ಲಾ ನಿವಾಸಿ ಮೀನಾಕ್ಷಿ ಬಂಧಿತ ಆರೋಪಿ. ಆಕೆಯಿಂದ ಪೊಲೀಸರು 4 ಚಿನ್ನದ ಬಳೆಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ವ್ಯಕ್ತಿಯೊಬ್ಬರು ವಯಸ್ಸಾದ ತಮ್ಮ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಮೀನಾಕ್ಷಿಯನ್ನು ನೇಮಿಸಿಕೊಂಡಿದ್ದರು. ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ಬೀರುವಿನ ಲಾಕರ್ ತೆಗೆದು 5 ಸಾವಿರ ರೂ. ನಗದು ಹಾಗೂ 60 ಗ್ರಾಂ ಚಿನ್ನದ ಬಳೆಗಳನ್ನು ಕಳ್ಳತನ ಮಾಡಿದ್ದಳು.

ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಮೀನಾಕ್ಷಿ, ಮದ್ಯ ಸೇವನೆಯ ಚಟಕ್ಕೆ ಬಿದ್ದಿದ್ದಳು. ಹೀಗಾಗಿ ಹಣದ ಅವಶ್ಯಕತೆಯಿಂದ ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ.

ಮೊದಲಿಗೆ ಅಕೆಯ ವಿಳಾಸ ಯಾರಿಗೂ ಗೊತ್ತಿರಲಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿದ್ಯಾರಣ್ಯಪುರಂ ಪೊಲೀಸರು ವೈದ್ಯರ ಮನೆಯಲ್ಲಿದ್ದ ಸಿಸಿ ಕ್ಯಾಮರಾ ಟಿವಿ ಫೋಟೇಜ್ ಸಹಾಯದಿಂದ ಆಕೆಯನ್ನು ಒಂದೇ ದಿನದಲ್ಲಿಯೇ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...