Please assign a menu to the primary menu location under menu

NEWSನಮ್ಮಜಿಲ್ಲೆ

ಗಿರಿಜನರಿಗೆ ಅಧಿಕಾರಿಗಳು ಸಹಕಾರ ನೀಡಿ: ಶಾಸಕ ಮಹದೇವ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಕಾಡಂಚಿನ ಗ್ರಾಮಸ್ಥರಿಗೆ ಮತ್ತು ಗಿರಿಜನರಿಗೆ ಚೆಸ್ಕಾಂ  ಇಲಾಖೆ ಮೂಲ ಸೌಕರ್ಯಗಳನ್ನು ಒದಗಿಸುವ ಸಂದರ್ಭದಲ್ಲಿ ಅಧಿಕಾರಿಗಳು  ಸಹಕಾರ ನೀಡಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ತಾಲೂಕಿನ ಹಬಟೂರು, ಗಾಂಧೀನಗರ, ಕೊಪ್ಪ ಹಾಗೂ ಹೊನ್ನಾಪುರ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಕಾಡಂಚಿನಲ್ಲಿ ವಾಸಮಾಡುತ್ತಿರುವ ಗಿರಿಜನರು ರೈತರಿಗೆ ಚೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕ ಪಡೆಯಲು ಮತ್ತಿತರರ ಕೆಲಸಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದ್ದು ಮಾನವನ ಮೂಲಸೌಕರ್ಯ  ಕಲ್ಪಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದ್ದು ಇದಕ್ಕೆ ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು ಚೆಸ್ಕಾಂ ಅಧಿಕಾರಿಗಳು ಗಿರಿಜನರಿಗೆ ಕಾಡಂಚಿನ ಪ್ರದೇಶದ ರೈತರಿಗೆ  ಅನುಕೂಲವಾಗುವ ರೀತಿಯಲ್ಲಿ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೋಟ್ಯಂತ ರೂ.ಗಳ ದುರುಪಯೋಗವನ್ನು ಹಿಂದೆ ಅಧಿಕಾರ ನಡೆಸಿದವರು ಮಾಡಿದ ಪರಿಣಾಮ ಇಂದು ಯೋಜನೆ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ. ಇದು ಮಹತ್ವದ ಯೋಜನೆಯಾಗಿದ್ದು ಸದುಪಯೋಗ ಪಡಿಸಿಕೊಂಡರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಇದನ್ನು ರೈತರು ನಮ್ಮ  ಹೊಲನಮ್ಮ ರಸ್ತೆ ಯೋಜನೆ, ಕೃಷಿಹೊಂಡ, ಇಂಗು ಬಚ್ಚಲು ನಿರ್ಮಾಣ ಮುಂತಾದ ತಮ್ಮ ಸ್ವಂತ ಜಮೀನುಗಳ ಅಭಿವೃದ್ಧಿಗೆ ಬಳಸಿಕೊಂಡು ಗ್ರಾಮ ಮತ್ತು ಸ್ವಂತ ಅಭಿವೃದ್ದಿಯನ್ನು ಮಾಡಬಹುದಾಗಿದೆ. ಎಲ್ಲಾ ಕೆಲಸಗಳಿಗೂ ಶಾಸಕರ ಅನುದಾನವನ್ನೇ ಕಾಯದೆ ಅಧಿಕಾರಿಗಳು ಮತ್ತು ಜನಪತ್ರಿನಿಧಿಗಳು ಯೋಜನೆಯ ಸದುಪಯೋಗಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಜಾನುವಾರುಗಳ ಕಳ್ಳತನ ಮತ್ತು ಅವುಗಳನ್ನು ಹತ್ಯೆಮಾಡುವ ಪ್ರಕರಣಗಳು ಹೆಚ್ಚಾಗಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮವಹಿಸುವಂತೆ ಬೈಲುಕೊಪ್ಪೆ ಎಸ್ಐ ಪುಟ್ಟರಾಜುರವರಿಗೆ ತಿಳಿಸಿದರು.

ತಾಪಂ ಸ್ಥಾಯಿಸಮಿತಿ ಅಧ್ಯಕ್ಷ ಎ.ಟಿ.ರಂಗಸ್ವಾಮಿ, ಇಒ ಸಿ.ಆರ್.ಕೃಷ್ಣಕುಮಾರ್, ಕೊಪ್ಪ ಗ್ರಾ.ಪಂ.ಅಧ್ಯಕ್ಷ ರೇಣುಕಾಸ್ವಾಮಿ, ಉಪಾಧ್ಯಕ್ಷೆ ಸಿಂಧು, ಪಿಡಿಒ ಸತೀಶ್, ಆರ್ಐ ಪ್ರದೀಪ್ ಎನ್.ಕೆ., ಗ್ರಾಮಲೆಕ್ಕಿಗ ನವೀನ್ರಾವ್ ಎಂ.ಎಸ್, ಮಾಜಿ ತಾ.ಪಂ.ಸದಸ್ಯ ರಘುನಾಥ್,  ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಇಂಜಿನಿಯರ್ ಕುಮಾರ್, ಪಾಷಾ, ಮುಖಂಡರಾದ ಅಶೋಕ್, ಸತೀಶ್ ಇದ್ದರು.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ