NEWSನಮ್ಮಜಿಲ್ಲೆ

ದಿನಪೂರ್ತಿ ಸುರಿದ ಮಳೆಗೆ ಹಳೇ ಕಟ್ಟಡ ಕುಸಿತ, ಇಂದೇ ನೆಲಸಮಕ್ಕೆ ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ, ಪೂರ್ವ ವಲಯ, ಹಲಸೂರು ವಾರ್ಡ್ ವ್ಯಾಪ್ತಿಯ ಮಿಲ್ಕ್ ಮ್ಯಾನ್ ಸ್ಟ್ರೀಟ್ ನಲ್ಲಿ ಇಂದು ಮುಂಜಾನೆ 6 ಗಂಟೆಗೆ 58 ವರ್ಷಗಳ ಹಳೆಯ ಕಟ್ಟಡ ಕುಸಿದು ಬಿದ್ದಿದ್ದು ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್‌ ಗುಪ್ತ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ದಿನಪೂರ್ತಿ ಸುರಿದ ಮಳೆಗೆ ಬೆಂಗಳೂರಿನಲ್ಲಿ ಹಲವು ಹಳೇ ಕಟ್ಟಗಳು ಶಿಥಿಲಾವಸ್ಥೆ ತಲುಪಿದ್ದು, ಅವುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ಈ ನಡುವೆ ಮಿಲ್ಕ್ ಮ್ಯಾನ್ ಸ್ಟ್ರೀಟ್ ನಲ್ಲಿ ನೆಲ ಮತ್ತು ಮೊದಲ ಮಹಡಿಯನ್ನೊಳಗೊಂಡಿರುವ ಸುಮಾರು 20 ಚದುರದ ಅಡಿಯ ಕಟ್ಟಡವು ಕುಸಿದಿದ್ದು, ಈ ಕಟ್ಟಡವನ್ನು ಮಣ್ಣು ಹಾಗೂ ಇಟ್ಟಿಗೆಯಿಂದ ನಿರ್ಮಿಸಲಾಗಿದೆ.

ಶಿಥಿಲಗೊಂಡಿದ್ದ ಕಟ್ಟಡಕ್ಕೆ ಪಾಲಿಕೆ ಈಗಾಗಲೇ ನೋಟಿಸ್ ನೀಡಿ ಮಾಲೀಕರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಲಾಗಿತ್ತು. ಕಟ್ಟಡ ಕುಸಿದ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ.

ಪ್ರಸ್ತುತ ಭಗ್ನಾವಶೇಷಗಳ(ಕಟ್ಟಡ ತ್ಯಾಜ್ಯ) ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ಸ್ಥಳದಲ್ಲಿ ಇನ್ನೆರಡು ಕಟ್ಟಡಗಳು ಶಿಥಿಲಗೊಂಡಿದ್ದು, ಅವನ್ನು ಕೂಡಾ ಇಂದು ನೆಲಸಮಗೊಳಿಸಲಾಗುವುದು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ