NEWSನಮ್ಮಜಿಲ್ಲೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ 

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೊರೊನಾ ಸೋಂಕಿತರ ಆರೈಕೆಗಾಗಿ ಎರಡು ಆಕ್ಸಿಜನ್ ಕಾನ್ಸಂಟ್ರೇಟರ್ ಯಂತ್ರಗಳನ್ನು ಶಾಸಕ ಕೆ.ಮಹದೇವ್  ಮೂಲಕ ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿದರು.

ಈ ವೇಳೆ ಶಾಸಕ  ಮಾತನಾಡಿ, ರಾಜ್ಯದ ಜನತೆ ಕೊರೊನಾದಂತಹ ಸಂಕಷ್ಟ ಸಂದರ್ಭದಲ್ಲಿದ್ದಾಗ ಅವರ ನೆರವಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ, ಸೇವಾ ಮನೋಭಾವದ ಮೂಲಕ ರಾಜ್ಯಾದ್ಯಂತ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಸರ್ಕಾರದ ಜತೆ ಕೈಜೋಡಿಸಿ ನೊಂದವರಿಗೆ ಸಹಾಯ ಮಾಡಿ ಮಾದರಿಯಾಗಿದ್ದಾರೆ ಎಂದರು.

ಸಂಸ್ಥೆಯ ಕರಾವಳಿ ಪ್ರಾದೇಶಿಕ ವಿಭಾಗದ ನಿರ್ದೇಶಕ ವಸಂತ್ ಸಾಲಿಯಾನ್  ಮಾತನಾಡಿ, ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೋಂಕಿತರ ಆರೈಕೆಗೆ ಸಂಸ್ಥೆಯು ಸಹಾಯ ಮಾಡುವ ಉದ್ದೇಶದಿಂದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಹಲವೆಡೆಯ ಆಸ್ಪತ್ರೆಗಳಿಗೆ 2.5 ಕೋಟಿ ವೆಚ್ಚದ 100 ಟನ್ ಆಕ್ಸಿಜನ್ ಪೂರೈಕೆ, ನಾಲ್ಕು ಸ್ಥಳಗಳಲ್ಲಿ ಕೊವಿಡ್ ಕೇರ್ ಸೆಂಟರ್ ಸ್ಥಾಪನೆ, ಮುನ್ನೂರಕ್ಕೂ ಹೆಚ್ಚು ಆಕ್ಸಿಜನ್ ಕಾನ್ಸನ್ ಟ್ರೇಟರ್ ಹಾಗೂ ಇಪ್ಪತ್ತಕ್ಕೂ ಹೆಚ್ಚು ವೆಂಟಿಲೇಟರ್ ವಿತರಿಸಿ ಸಾಮಾನ್ಯ ಜನರ ಸಹಕಾರಕ್ಕೆ ಮುಂದಾಗಿದೆ ಎಂದರು.

ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕ ಡಾ.ಯೋಗೀಶ್ ಮಾತನಾಡಿ ರಾಜ್ಯದ ಜನತೆ ಕೊರೊನಾ ಸಂಕಷ್ಟದಲ್ಲಿರುವುದನ್ನು ಮನಗಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡಿದ ಸಾಲದ ಹಣದ ಮರುಪಾವತಿಗೆ ಮುಂಬರುವ ಡಿಸೆಂಬರ್ ತಿಂಗಳವರೆಗೆ ಕಾಲಾವಕಾಶ ನೀಡಿರುವ ಬಗ್ಗೆ ಈಗಾಗಲೇ ಸಂಸ್ಥೆ ವತಿಯಿಂದ ಮಾಹಿತಿ ನೀಡಲಾಗಿದೆ ಎಂದರು.

ತಹಸೀಲ್ದಾರ್ ಕೆ.ಚಂದ್ರಮೌಳಿ, ತಾಪಂ ಇಒ ಸಿ.ಆರ್. ಕೃಷ್ಣಕುಮಾರ್, ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಆರ್ ಪ್ರಕಾಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ, ಕೃಷಿ ಅಧಿಕಾರಿ ಉಮೇಶ್,ಮುಖಂಡ ಎ.ಟಿ. ರಂಗಸ್ವಾಮಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ