Vijayapatha – ವಿಜಯಪಥ
Friday, November 1, 2024
Breaking NewsNEWSನಮ್ಮಜಿಲ್ಲೆ

ಪೌರಕಾರ್ಮಿಕರ ಸುರಕ್ಷತೆಗೆ ಹೆಚ್ಚು ಗಮನ ಹರಿಸಿ: ಎಂ.ವಿ. ವೆಂಕಟೇಶ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ : ಕೊರೊನಾ ವಾರಿಯರ್ಸ್ ಗಳಾದ ಪೌರಕಾರ್ಮಿಕರ ಸುರಕ್ಷತೆಯ ಬಗ್ಗೆ ಇಲಾಖಾಧಿಕಾರಿಗಳು ನಿರ್ಲಕ್ಷತನ ವಹಿಸಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸಮಿತಿ ಸದಸ್ಯ ಎಂ. ವಿ. ವೆಂಕಟೇಶ್ ಎಚ್ಚರಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಟ್ಟಣದ ಪುರಸಭೆ ವ್ಯಾಪ್ತಿಯ ಪೌರಕಾರ್ಮಿಕರ ಯೋಗಕ್ಷೇಮ ಮತ್ತು ಕುಂದು ಕೊರತೆಯ ಬಗ್ಗೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪೌರಾಕಾರ್ಮಿಕರ ಸಮಸ್ಯೆ ಆಲಿಸಿ ಮಾತನಾಡಿದ ಅವರು ಕೊರೊನಾ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳು ಪ್ರತಿನಿತ್ಯ ಸೇವೆ ಸಲ್ಲಿಸುತ್ತಿದ್ದಾರೆ ಆದ್ದರಿಂದ ಅವರ ಸುರಕ್ಷತೆಯ ಬಗ್ಗೆ ಇಲಾಖಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು.

ಈಗಾಗಲೇ ಇತರೆ ಭಾಗಗಳಲ್ಲಿ ಪೌರಕಾರ್ಮಿಕ ನೌಕರರು ಸೋಂಕಿಗೆ ಒಳಗಾಗಿ ಪರಿತಪಿಸುತ್ತಿದ್ದಾರೆ. ಇದಲ್ಲದೆ ಕೆಲವು ಭಾಗಗಳಲ್ಲಿ ನೌಕರರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಅವರ ಕುಟುಂಬ ನಿರ್ವಹಣೆ ಶೋಚನೀಯ ಸ್ಥಿತಿ ತಲುಪಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ವಹಿಸುತ್ತಿದೆ ಎಂದರು.

ಇಲಾಖಾಧಿಕಾರಿಗಳು ಪ್ರತಿನಿತ್ಯ ನೌಕರರ ಆರೋಗ್ಯ ತಪಾಸಣೆ ಮಾಡಬೇಕು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆಗೆ ಸೂಚಿಸಿ ಅದರ ವೆಚ್ಚವನ್ನು ಇಲಾಖೆ ಬರಿಸಬೇಕು ಮತ್ತು ಇವರಿಗೆ ಸುರಕ್ಷತಾ ಸಾಮಗ್ರಿಗಳಾದ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಸಮವಸ್ತ್ರ ಗಳನ್ನು ನೀಡಬೇಕು.

ಈಗಾಗಲೇ ನೌಕರರಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಿದ್ದು, ಕರ್ತವ್ಯದ ಅವಧಿಯನ್ನು ಬೆಳಗ್ಗೆ 6 ರಿಂದ 11 ಗಂಟೆಗೆ ನಿಗದಿಪಡಿಸಲಾಗಿದೆ. ಇದರೊಂದಿಗೆ ನೌಕರರ ವೇತನವು ಕೂಡ ಪ್ರತಿ ತಿಂಗಳು ಪಾವತಿಯಾಗಬೇಕು. ಈ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಇಲಾಖೆಯು ಪಾಲಿಸಬೇಕು. ಆದೇಶದ ಬಗ್ಗೆ ನಿರ್ಲಕ್ಷತನ ವಹಿಸುವ ಅಧಿಕಾರಿಗಳ ವಿರುದ್ಧ ಆಯೋಗವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಜಿ. ಮುರುಗೇಶ್, ಎಚ್. ಕೆ. ಮಹೇಶ್, ಮುಖಂಡರಾದ ಹುಣಸೂರು ಪೆರುಮಾಳ್, ಪುರಸಭಾ ಆರೋಗ್ಯ ನಿರೀಕ್ಷಕರಾದ ಆದರ್ಶ, ಪ್ರದೀಪ್ ಕುಮಾರ್ , ನೌಕರರ ಸಂಘದ ಅಧ್ಯಕ್ಷ ಜಿ. ಮಹದೇವ್, ಉಪಾಧ್ಯಕ್ಷ ಆರ್ಮುಗಂ ಮತ್ತಿತರರುಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ