ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ತಾಲೂಕಿನ ಚನ್ನಕಲ್ ಕಾವಲು ಗ್ರಾಪಂಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ದಿಢೀರ್ ಭೇಟಿ ನೀಡಿ ಕೊರೊನಾ ಸೋಂಕು ನಿರ್ವಹಣೆ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಯಾವುದೇ ಕೆಲಸಗಳಲ್ಲಿ ಕೊರತೆ ಇದ್ದರೆ ನನ್ನ ಗಮನಕ್ಕೆ ತನ್ನಿ ಸಮಸ್ಯೆ ಬಗೆಹರಿಸುವೆ,. ಆರ್ಟಿಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚು ಮಾಡುವ ಮೂಲಕ ಸೋಂಕಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಇನ್ನು ಕೊರೊನಾ ಸೋಂಕಿನ ತಪಾಸಣೆ ಹಾಗೂ ಲಸಿಕೆ ವಿತರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ಅವರಿಂದ ಮಾಹಿತಿ ಪಡೆದರು. ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕಿನ ಪ್ರಮಾಣ ತಗ್ಗಿಸಲು ಗ್ರಾಪಂ ಗಳ ಮೂಲಕ ಕೈಗೊಂಡಿರುವ ಕ್ರಮಗಳ ಬಗ್ಗೆ ತಾಪಂ ಇಒ ಸಿ.ಆರ್ .ಕೃಷ್ಣಕುಮಾರ್ ಅವರಿಂದ ಮಾಹಿತಿ ಪಡೆದರು.
ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ಸೋಂಕು ತಪಾಸಣೆಗೆ ಜನರ ಸಹಕಾರ ಸಿಗುತ್ತಿದೆಯೇ, ಮೇಲಧಿಕಾರಿಗಳು ನಿಮಗೆ ಸಹಕಾರ ನೀಡುತ್ತಿದ್ದಾರಾ. ಅಗತ್ಯ ಸುರಕ್ಷಾ ಪರಿಕರಗಳನ್ನು ವಿತರಿಸಿದ್ದಾರಾ, ಸೋಂಕಿತರು ಕಂಡು ಬಂದಾಗ ನೀವು ತೆಗೆದುಕೊಳ್ಳುವ ಕ್ರಮಗಳು ಯಾವ್ಯಾವು ಎಂಬಿತ್ಯಾದಿ ಬಗ್ಗೆ ಮಾಹಿತಿ ಪಡೆದರು.
ಶಾಸಕ ಕೆ.ಮಹದೇವ್, ಜಿಪಂ ಸಿಇಒ ಯೋಗೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಉಪ ವಿಭಾಗಾಧಿಕಾರಿ ವೀಣಾ, ತಹಸೀಲ್ದಾರ್ ಕೆ.ಚಂದ್ರಮೌಳಿ, ಡಿವೈಎಸ್ಪಿ ರವಿಪ್ರಸಾದ್, ಬೆಟ್ಟದಪುರ ಪಿಎಸ್ಐ ಬಿ.ಕೆ.ಮಹೇಶ್ ಕುಮಾರ್, ಗ್ರಾಪಂ ಅಧ್ಯಕ್ಷೆ ಮಂದಾರ, ಉಪಾಧ್ಯಕ್ಷ ಧನರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದ್ದರು.