ಪಿರಿಯಾಪಟ್ಟಣ: ಪಟ್ಟಣದ ದೊಡ್ಡಬೀದಿ ನಿವಾಸಿ ಹಾಗೂ ಪುರಸಭಾ ನಾಮನಿರ್ದೇಶಿತ ಸದಸ್ಯ ಸುದರ್ಶನ್ (44) ಕೊರೊನಾ ಸೋಂಕಿನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ.
ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಲವಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಕಾರಣ ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಇವರನ್ನು ಪಿರಿಯಾಪಟ್ಟಣ ಪುರಸಭೆ ನಾಮ ನಿರ್ದೇಶನ ಮಾಡಲಾಗಿತ್ತು.
ಮೃತರು ಓರ್ಗಂವ ಪುತ್ರ , ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದು, ಭಾನುವಾರ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಯಿತು.