Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ಪೊಲೀಸ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ಕೊರೊನಾದಿಂದ ಮೃತಪಟ್ಟಿಲ್ಲ..!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಶೋ ಸ್ಪರ್ಧಿ ಪೊಲೀಸ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊರೊನಾದಿಂದ ಸಾವನ್ನಪ್ಪಿಲ್ಲ ಕೌಟುಂಬಿಕ ಕಲಹ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸುಬ್ರಮಣಿ ಪತ್ನಿ ಜ್ಯೋತಿ (33) ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ವೆಂಟಿಲೇಟರ್ ಬೆಡ್ ಸಿಗದೇ ಪರದಾಡಿದ್ದರು. ಬಳಿಕ ಸಂಬಂಧಿಕರು ಬೆಂಗಳೂರು ಹೊರವಲಯದ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ಸೋಮವಾರ ಸಂಜೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಜ್ಯೋತಿ ಅಸುನೀಗಿದ್ದರು.

ಆಸ್ಪತ್ರೆಗೆ ದಾಖಲಿಸಿದ ವೇಳೆ ಜ್ಯೋತಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಕೋವಿಡ್ ಸೋಂಕಿನಿಂದ ಸುಬ್ರಮಣಿ ಪತ್ನಿ ಜ್ಯೋತಿ ಮೃತಪಟ್ಟಿದ್ದಾಗಿ ಪೊಲೀಸರ ವಾಟ್ಸ್ ಆಪ್ ಗ್ರೂಪ್‍ಗಳಲ್ಲಿ ಫೋಟೋ ವೈರಲ್ ಆಗಿತ್ತು.

ಹೆಡ್ ಕಾನ್ಸ್ ಸ್ಟೇಬಲ್ ಸುಬ್ರಮಣಿ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಸುಬ್ರಮಣಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಆರೋಪ ಹಾಗೂ ಖಿನ್ನತೆಗೊಳಗಾಗಿದ್ದ ಶಂಕೆ ವ್ಯಕ್ತವಾಗತ್ತಿದೆ. ಕೋಲಾರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ