Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆರಾಜಕೀಯ

ರಸ್ತೆ ಗುಂಡಿಗಳಿಗೆ ಸಂಬಂಧಿಸಿ ಎಎಪಿಯಿಂದ ಕಾರ್ಯಪಡೆ ಹಾಗೂ ವಾಟ್ಸಪ್‌ ಸಹಾಯವಾಣಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್‌ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್‌ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಪಕ್ಷದ ಮುಖಂಡ ಹಾಗೂ ವಕೀಲ ಜಗದೀಶ್‌ ಕೆ.ಎನ್‌. ಮಹಾದೇವ್‌ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ.

ರಸ್ತೆ ಗುಂಡಿಗಳ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್‌ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ ಎಂದು ಹೇಳಿದರು.

“ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್‌ ಸಹಾಯವಾಣಿ 9513319676 ಸಂಖ್ಯೆಗೆ ಮೆಸೇಜ್‌ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ.

ಬಿಬಿಎಂಪಿ, ಸ್ಥಳೀಯ ಶಾಸಕ, ಮಾಜಿ ಕಾರ್ಪೊರೇಟರ್‌, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟ ಆರಂಭಿಸುತ್ತೇವೆ. ರಾಜಧಾನಿ ಬೆಂಗಳೂರು ಹಾಗೂ ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ನಾವು ಸಂಪೂರ್ಣ ಸಿದ್ಧವಿದ್ದೇವೆ ಎಂದು ಜಗದೀಶ್‌ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಬೆಂಗಳೂರಿನ ರಸ್ತೆಗುಂಡಿಗಳಿಗೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷವು ನಿರಂತರವಾಗಿ ಹೋರಾಡುತ್ತಿದೆ. ಹಲವು ಪ್ರತಿಭಟನೆ ಹಾಗೂ ರಸ್ತೆಗುಂಡಿ ಹಬ್ಬ ಎಂಬ ವಿನೂತನ ಚಳವಳಿ ನಡೆಸಿ ಜನಜಾಗೃತಿ ಮೂಡಿಸಿದ್ದೇವೆ.

ಈಗ ವಾಟ್ಸಪ್‌ ಸಹಾಯವಾಣಿ ಹಾಗೂ ಕಾರ್ಯಪಡೆಯ ಮೂಲಕ ಮತ್ತೊಂದು ಹಂತದ ಹೋರಾಟ ಆರಂಭಿಸುತ್ತಿದ್ದೇವೆ. ರಾಜ್ಯವನ್ನಾಳಿದ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಸರ್ಕಾರಗಳು ಬೆಂಗಳೂರಿನ ರಸ್ತೆಗಳಿಗಾಗಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,000 ಕೋಟಿ ಮೊತ್ತವನ್ನು, ಅಂದರೆ ದಿನಕ್ಕೆ ಸರಾಸರಿ 11 ಕೋಟಿ ರೂಪಾಯಿಯನ್ನು ಖರ್ಚು ಮಾಡಿವೆ. ಇದು ಜನರ ತೆರಿಗೆ ಹಣವಾಗಿದ್ದು, ಇದರಲ್ಲಾದ ಭ್ರಷ್ಟಾಚಾರವನ್ನು ಪ್ರಶ್ನಿಸುವ ಸಂಪೂರ್ಣ ಹಕ್ಕು ಜನರಿಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಹಾಗೂ ಜ್ಯೋತಿಷ್ ಕುಮಾರ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ