ಕೊಳ್ಳೇಗಾಲ: ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶ ಪಡಿಸಿಕೊಂಡಿದ್ದು, ಚಾಲಕ ಪರಾರಿಯಾಗಿದ್ದಾನೆ.
ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಅನ್ನು ಪೊಲೀಸರು ತಡೆದಿದ್ದಾರೆ.
ಈ ವೇಳೆ ಎಸ್ಐ ಅಶೋಕ್, ಪೇದೆ ಶಿವಕುಮಾರ್ ಅವರನ್ನು ಕಂಡು ಚಾಲಕ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದಾರೆ.
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.