NEWSನಮ್ಮಜಿಲ್ಲೆಸಂಸ್ಕೃತಿ

ಹಾವೇರಿ ಪ್ರವಾಸಕ್ಷೇತ್ರಗಳಿಗೆ ಪ್ರವಾಸಿಗರ ಆಕರ್ಷಣೆಗೆ ಕ್ರಮ-ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅಪರಿಮಿತ ಅವಕಾಶಗಳಿವೆ. ಪ್ರವಾಸಕ್ಕೆ ಅಗತ್ಯ ಸಾರಿಗೆ, ವಸತಿ ಹಾಗೂ ಮೂಲ ಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿದರೆ ಪ್ರವಾಸಿಗರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಡಿಜಿಟಲ್ ಡಿಸಪ್ಲೇ ಹಾಗೂ ಕಲಾವಿದರಿಂದ ಪ್ರಚಾರ ಕೈಗೊಳ್ಳಲಾಗುವುದು. ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚಿಸಿ ಪ್ರವಾಸೋದ್ಯಮ ವಿಜನ್ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ಶಿಶುವಿನಹಾಳ ಅಭಿವೃದ್ಧಿಗೆ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ ಕಾಗಿನೆಲೆ ಅಭಿವೃದ್ಧಿ ಪಡಿಸಲಾಗಿದೆ. ಸರ್ವಜ್ಞ ಪೀಠದ ಕೆಲಸ ಸದ್ಯದಲ್ಲೇ ಆರಂಭಿಸಲಾಗುವುದು. ಒಟ್ಟಾರೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ನಮ್ಮ ಹಿರಿಯರು ಹೇಳಿದಂತೆ “ಕೋಶ ಓದಬೇಕು ದೇಶ ಸುತ್ತಬೇಕು”. ಬೇರೆ ಬೇರೆ ಸ್ಥಳಗಳಿಗೆ ಪ್ರವಾಸಕೈಗೊಳ್ಳುವುದರಿಂದ ಆ ಪ್ರದೇಶಗಳ ಆಚಾರ-ವಿಚಾರ, ಸಂಪ್ರದಾಯ, ಸಂಸ್ಕøತಿ, ಕಲೆ, ಸಾಹಿತ್ಯ, ಸಂಗೀತ ಪರಿಚಯವಾಗುತ್ತದೆ. ಇದರಿಂದ ವ್ಯಕ್ತಿತ್ವ ವಿಕನಗೊಳ್ಳುತ್ತದೆ. ಪ್ರವಾಸೋದ್ಯಮ ಆರ್ಥಿಕ ಅಭಿವೃದ್ಧಿ ಜೊತೆಗೆ ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಉಪಸ್ಥಿತರಿದ್ದರು. ಬಸವರಾಜ ಶಿಗ್ಗಾಂವ ಮತ್ತು ತಂಡದವರು ರೈತ ಗೀತೆ ಹಾಗೂ ರೇಖಾ ಕುಲಕರ್ಣಿ ಮತ್ತು ತಂಡದವರು ವಚನ ಗಾಯನ ಹಾಡಿದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC