ಬನ್ನೂರು: ಹೋಬಳಿಯ ಮಾದಿಗಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಎಂ.ಎಂ.ರಾಮಕೃಷ್ಣ (ದೊಡ್ಡಯ್ಯ) (50) ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ತಡರಾತ್ರಿ 1 ಗಂಟೆ ಸಮಯದಲ್ಲಿ ಮಲಗಿದ್ದಾಗಲೇ ಹೃಯಾಘಾತವಾಗಿದೆ. ಕೂಡಲೇ ಮನೆಯವರು ಬನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ.
ಕಳೆದ 20 ವರ್ಷಗಳಿಂದ ಮಾದಿಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಸ್ವ ಗ್ರಾಮ ಮಾದಿಗಹಳ್ಳಿಯ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.