ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿಯೂ ಮುಂದುವರಿದ ಜನ ಸಮುದಾಯಗಳಿಗೂ ಪ.ಜಾತಿ ಮತ್ತು ಪ.ಪಂಗಡ ಹಾಗೂ ಹಿಂ.ವರ್ಗಗಳ ಮೀಸಲಾತಿ ನೀಡುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಉಮಾ ಮಹದೇವ ಆರೋಪಿಸಿದರು.
ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕಬಿನಿ ಅತಿಥಿ ಗೃಹದಲ್ಲಿ “ದಿಕ್ಕು ತಪ್ಪುತ್ತಿರುವ ಮೀಸಲಾತಿ ಮೂಲ ಆಶಯ ಮತ್ತು ಸಮಕಾಲಿನ ಸವಾಲುಗಳು” ಕುರಿತು ವಿಚಾರಗೋಷ್ಠಿಯ ಹಿನ್ನಲೆಯಲ್ಲಿ ಕರೆಯಲಾಗಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇಂತಹ ಸನ್ನಿವೇಶದಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಾ.14ರ ಭಾನುವಾರ(ನಾಳೆ) ಬೆಳಗ್ಗೆ 10.30 ಗಂಟೆಗೆ ತಾಲೂಕು ನಾಯಕರ ಸಂಘದ ಸಹಭಾಗಿತ್ವದಲ್ಲಿ ದಲಿತ ಸಂಘರ್ಷ ಸಮಿತಿಯ ವತಿಯಿಂದ “ದಿಕ್ಕು ತಪ್ಪುತ್ತಿರುವ ಮೀಸಲಾತಿ ಮೂಲ ಆಶಯ ಮತ್ತು ಸಮಕಾಲಿನ ಸವಾಲುಗಳು” ಕುರಿತು ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಉದ್ಘಾಟನಾ ಗೋಷ್ಠಿಯನ್ನು ಶಾಸಕ ಎಂ.ಅಶ್ವಿನ್ ಕುಮಾರ್ ಉದ್ಘಾಟಿಸಲಿದ್ದು, ವರುಣ ಶಾಸಕ ಡಾ.ಎಸ್.ಯತೀಂದ್ರ ಆಶಯ ನುಡಿ, ಮೈಸೂರು ವಿವಿಯ ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಡಾ.ಜೆ.ಸೋಮಶೇಖರ್ ದಿಕ್ಸೂಚಿ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ಧಾರ್ಥ, ವಸತಿ ಯೋಜನೆ ಸಮಿತಿ ಮಾಜಿ ಅಧ್ಯಕ್ಷ ಸುನೀಲ್ ಬೋಸ್, ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆಲಗೂಡು ನಾಗರಾಜು ಹಾಗೂ ನಾಯಕರ ಸಂಘದ ಮಾಜಿ ಅಧ್ಯಕ್ಷ ರಂಗರಾಜಪುರ ಚಿನ್ನಸ್ವಾಮಿ ಭಾಗವಹಿಸುವರು ಎಂದರು.
ಮಧ್ಯಾಹ್ನ 12 ಗಂಟೆಗೆ “ಸ್ಪೃಶ್ಯ ಜಾತಿಗಳನ್ನು ಎಸ್ಸಿ/ಎಸ್ಟಿ ಪಟ್ಟಿಗೆ ಸೇರಿಸುವುದರಿಂದ ಆಗುವ ಪರಿಣಾಮಗಳು” ಕುರಿತು ನಡೆಯುವ ಮೊದಲ ಗೋಷ್ಠಿಯಲ್ಲಿ ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ಮಂಡ್ಯ ವಿಷಯ ಮಂಡನೆ ಮಾಡುವರು.
ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್ಸಿ/ಎಸ್ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ, ಎಸ್ ಬಿ ಎಂ ನಿವೃತ್ತ ವ್ಯವಸ್ಥಾಪಕ ವೆಂಕಟರಾಮಯ್ಯ, ದಸಂಸ ಜಿಲ್ಲಾ ಖಜಾಂಚಿ ಮೂಡಹಳ್ಳಿ ಮಹದೇವ, ಮುಖಂಡರಾದ ಸೋಸಲೆ ದೇವರಾಜು, ಬಿ.ಮರಯ್ಯ, ಗೋವಿಂದರಾಜು, ಆಲಗೂಡು ರೇವಣ್ಣ ಭಾಗವಹಿಸುವರು.
ಮದ್ಯಾಹ್ನ 2ಕ್ಕೆ ನಡೆಯಲಿರುವ “ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣ ಹಾಗೂ ಹೊರಗುತ್ತಿಗೆಯಿಂದ ಮೀಸಲಾತಿ ನಾಶ ಹುನ್ನಾರ” ಕುರಿತ ಎರಡನೇ ವಿಚಾರಗೋಷ್ಠಿಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ವಿಷಯ ಮಂಡನೆ ಮಾಡಲಿದ್ದು, ನಾಯಕ ಸಮುದಾಯದ ಹಿರಿಯ ಮುಖಂಡ, ಜಿ.ಪಂ ಮಾಜಿ ಸದಸ್ಯ ಹೊನ್ನನಾಯಕ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸ್ವರಾಜ್ ಇಂಡಿಯಾ ಪಕ್ಷದ ಮೈಸೂರು ನಗರಾಧ್ಯಕ್ಷ ಉಗ್ರನರಸಿಂಹೇಗೌಡ, ಸಹಪ್ರಾದ್ಯಾಪಕ ಡಾ.ಬಿ.ಕೆ.ಜ್ಞಾನಪ್ರಕಾಶ್, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕಿರಂಗೂರು ಸ್ವಾಮಿ, ತಾಲ್ಲೂಕು ಸಂಚಾಲಕ ಯಡದೊರೆ ಸಿದ್ದರಾಜು, ಬನ್ನೂರು ಪುರಸಭೆ ಮಾಜಿ ಸದಸ್ಯ ಚಿಕ್ಕಯ್ಯ, ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಖಜಾಂಚಿ ಪಿ.ಶಶಿಧರ್ ಹಾಗೂ ಬಾಬೂಜಿ ಸಂಘದ ತಾಲೂಕು ಅಧ್ಯಕ್ಷ ಮಲಿಯೂರು ಶಂಕರ್ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಸಂಜೆ 4.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಎಸ್.ನರೇಂದ್ರ ಕುಮಾರ್ ಸಮಾರೋಪ ಭಾಷಣ ಮಾಡುವರು.
ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಯಡದೊರೆ ಮಹದೇವಯ್ಯ, ಮೂಗೂರು ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಎಂ.ಡಿ.ಬಸವರಾಜು, ಜಿ.ಪಂ ಸದಸ್ಯ ಮಂಜುನಾಥನ್, ಮಾಜಿ ಸದಸ್ಯ ಕೆ.ಸಿ.ಲೋಕೇಶ್ ಹಾಗೂ ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಕುಕ್ಕೂರು ಗಣೇಶ್ ಉಪಸ್ಥಿತರಿರುವರು.
ವಿಚಾರಗೋಷ್ಠಿಗೆ ಬೆಂಬಲ ಸೂಚಿಸಿದ ಮೂಗೂರು ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಎಂ.ಡಿ.ಬಸವರಾಜು ಹಾಗೂ ಜಿ.ಪಂ ಮಾಜಿ ಸದಸ್ಯ ಹೊನ್ನನಾಯಕ ಮಾತನಾಡಿ, ಎಲ್ಲರಿಗೂ ಮೀಸಲಾತಿ ನೀಡಿದರೆ ಸಂವಿಧಾನ ಹಾಗೂ ಅಂಬೇಡ್ಕರ್ ಅವರ ಮೂಲ ಆಶಯಕ್ಕೆ ಧಕ್ಕೆಯಾಗಲಿದೆ. ಆಡಳಿತರೂಢ ಸರ್ಕಾರಗಳು ಮೀಸಲಾತಿ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಜಿ.ಪಂ ಮಾಜಿ ಸದಸ್ಯ ಕೆ.ಸಿ.ಲೋಕೇಶ್ ಮಾತನಾಡಿ, ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳ ಮೀಸಲಾತಿ ಕಸಿಯಲು ನಡೆಯುತ್ತಿರುವ ಹುನ್ನಾರದ ಬಗ್ಗೆ ಜಾಗೃತಿ ಮೂಡಿಸಲು ನಡೆಯುವ ಕಾರ್ಯಕ್ರಮಗಳಿಗೆ ಪಕ್ಷಾತೀತವಾಗಿ ಬೆಂಬಲವನ್ನು ನೀಡುತ್ತೇನೆ ಎಂದು ತಿಳಿಸಿದರು.
ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಯಡದೊರೆ ಮಹದೇವಯ್ಯ, ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆಲಗೂಡು ನಾಗರಾಜು, ಖಜಾಂಚಿ ಪಿ.ಶಶಿಧರ್, ನಿವೃತ್ತ ಕೃಷಿ ಅಧಿಕಾರಿ ಮಹದೇವಯ್ಯ, ಮುಖಂಡರಾದ ಹಿರಿಯೂರು ರಾಜೇಶ್, ಇಂಡವಾಳು ಬಸವರಾಜು, ಬೂದಹಳ್ಳಿ ಸಿದ್ದರಾಜು, ಚಂದಹಳ್ಳಿ ಮಲ್ಲೇಶ, ಸುಂದರನಾಯಕ, ಪುಟ್ಟರಾಜು ಹಾಗೂ ಇನ್ನಿತರರು ಉಪಸ್ಥಿತರಿದ್ದರು.