Please assign a menu to the primary menu location under menu

CrimeNEWSನಮ್ಮಜಿಲ್ಲೆ

ಬಾಳೆಗೊನೆ ಕದ್ದ ಎಂದು ಗುಡಿಸಲಿಗೆ ಬೆಂಕಿ ಹಚ್ಚಿ  ಕ್ರೌರ್ಯ ಮೆರೆದ ದುಷ್ಕರ್ಮಿಗಳು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಬಾಳೆಗೊನೆ ಕದ್ದ ಎಂಬ ಕಾರಣಕ್ಕೆ ಗುಡಿಸಲಿಗೆ ಬೆಂಕಿ ಹಚ್ಚಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೆಂಕಟೇಶ್ ಎನ್ನುವವರ ತೋಟದ ಗುಡಿಸಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ವೆಂಕಟೇಶ್ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬ. ಅಡಿಕೆ, ತೆಂಗು, ರಾಗಿ ನೋಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಆ ಗುಡಿಸಲಿಗೆ ಬೆಂಕಿ ಇಟ್ಟು ಕೆಲ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ.

ಗ್ರಾಮದ ರಾಜ್ ಕುಮಾರ್ ಹಾಗೂ ಲಿಂಗಮೂರ್ತಿ ಎನ್ನುವವರು ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಇದಕ್ಕೆ ಕಾರಣ ವೆಂಕಟೇಶ್ ಅವರ ತೋಟದಲ್ಲಿ ಬಾಳೆಗೋನೆ ಕದ್ದ ಅಂತಾ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕೂಡ ವೆಂಕಟೇಶ್ ನನ್ನ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ. ಆದರೆ ಅನಾರೋಗ್ಯದ ಕಾರಣ ವೆಂಕಟೇಶ್ ಠಾಣೆ ಹಾಜರಾಗಿರಲಿಲ್ಲ.

ಹೀಗಾಗಿ ಠಾಣೆಗೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಇಬ್ಬರು ಏಕಾಏಕಿ ಹೋಗಿ ವೆಂಕಟೇಶ್  ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಬೆಂಕಿಯ ಕೆನ್ನಾಲಿಗೆಗೆ ಗುಡಿಸಲಿನ ಅಕ್ಕ ಪಕ್ಕ ಇದ್ದ ಅಡಿಕೆ, ತೆಂಗು, ರಾಗಿ ಸ್ವಲ್ಪ ಮಟ್ಟಿಗೆ ಆಹುತಿಯಾಗಿದೆ. ಸದ್ಯ ಆರೋಪಗಳಿಗೆ ಪೂರಕವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯಾಂಶ ತನಿಖೆಯ ನಂತರವಷ್ಟೇ ಹೊರಬರಬೇಕಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...