Please assign a menu to the primary menu location under menu

CrimeNEWSನಮ್ಮಜಿಲ್ಲೆನಮ್ಮರಾಜ್ಯ

ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತೆ ಪರ ವಕೀಲರಿಗೆ ಬಂತು ಕೊಲೆ ಬೆದರಿಕೆ ಕರೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಪರ ವಕೀಲರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ವಕಾಲತ್ತು ವಹಿಸಿರುವ ವಕೀಲ ಜಗದೀಶ್‌ ಅವರೆ ಹೇಳಿದ್ದಾರೆ.

ನನಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿದ್ದು, ಅವುಗಳಿಗೆ ನಾನು ಬಗ್ಗೋದಿಲ್ಲ ಎಂದು ಫೇಸ್‌ಬುಕ್ ಲೈವ್‌ಗೆ ಬಂದು ತಿಳಿಸಿದ್ದಾರೆ.

ನಾವು ಸಂತ್ರಸ್ತೆ ಪರವಾಗಿ ಕೆಲಸ ಮಾಡಿ ಆಕೆಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ನನ್ನ ಸಹದ್ಯೋಗಿ ಮಂಜುನಾಥ್ ಅವರ ವಾಹನವನ್ನು ಕೆಲವರು ಹಿಂಬಾಲಿಸಿದ್ದಾರೆ. ನಮಗೆ ಇಷ್ಟೊಂದು ಬೆದರಿಕೆ ಇರುವಾಗ ಸಂತ್ರಸ್ತೆಯ ಸ್ಥಿತಿ ಹೇಗಿರಬಹುದು? ಈ ಪ್ರಕರಣದಲ್ಲಿ ನಾವು ನಾಶವಾದರೂ ಸಂತ್ರಸ್ತೆಗೆ ನ್ಯಾಯ ಕೊಡಿಸದೆ ಬಿಡುವುದಿಲ್ಲ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ತುಂಬಾ ಪ್ರಭಾವಿ ವ್ಯಕ್ತಿ. ಅವರ ಸಿಡಿ ಪ್ರಕರಣ ಕೈಗೆತ್ತಿಕೊಂಡ ನಂತರ ಹಲವಾರು ಪ್ರಶಂಸೆ ಹಾಗೂ ಬೆದರಿಕೆ ಕರೆಗಳು ಬರಲು ಪ್ರಾರಂಭವಾಗಿವೆ. ಮಂಗಳೂರು ಅಥವಾ ಚಿಕ್ಕಮಗಳೂರು ವ್ಯಾಪ್ತಿಯಿಂದ ಕರೆ ಮಾಡಿದ ಯುವಕನೊಬ್ಬ ನನ್ನ ತಲೆ ಕಡಿಯುವ ಬೆದರಿಕೆ ಒಡ್ಡಿದ್ದಾನೆ. ಈ ರೀತಿಯ ಬೆದರಿಕೆ ಕರೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ನಮಗೆ ಬರುತ್ತಿರುವ ಈ ಪ್ರಾಣ ಬೆದರಿಕೆಗಳನ್ನು ಸಂಬಾಳಿಸಿಕೊಳ್ಳುವಷ್ಟು ಸಾಮರ್ಥ್ಯ ಇದೆ. ಆದರೆ, ಸಂತ್ರಸ್ತೆ ನ್ಯಾಯಾಲಯ, ಪೊಲೀಸರ ಮುಂದೆ ಹಾಜರಾದರೆ ರಕ್ಷಣೆ ದೊರೆಯುವ ನಂಬಿಕೆ ಇಲ್ಲ. ಅಷ್ಟರಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ