ಬೆಂಗಳೂರು: ಕೊರೊನಾ ಸಫಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಶಾಲಾ, ಕಾಲೇಜುಗಳು ಪ್ರಾರಂಭವಾಗಿವೆ. ಹೀಗಾಗಿ ಬಿಎಂಟಿಸಿಯ ಸಾಮಾನ್ಯ ಬಸ್ಗಳಲ್ಲಿ ಶಾಲಾ, ಕಾಲೇಜಿನ ರಸೀದಿ ಶುಲ್ಕ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿ ತೋರಿಸಿ ವಿದ್ಯಾರ್ಥಿಗಳು ಪ್ರಯಾಣಿಸ ಬಹುದು ಎಂದು ಬಿಎಂಟಿಸಿ ತಿಳಿಸಿದೆ.
1 ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲಾ , ಕಾಲೇಜಿನ ಶುಲ್ಕ ರಸೀದಿ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿಯೊಂದಿಗೆ ನವೆಂಬರ್ 30 ರವರೆಗೆ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ದ್ವಿತೀಯ ಪಿಯುಸಿ ಹಾಗೂ ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಹಳೆಯ ಪಾಸು ಕಡ್ಡಾಯವಾಗಿದೆ ಎಂದು ಸಂಸ್ಥೆ ವಿವರಿಸಿದರು.