NEWSನಮ್ಮಜಿಲ್ಲೆರಾಜಕೀಯ

ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಸ್‌ವೈ ಹಲ್ಲೆ: ತನಿಖೆಗೆ ಮಾಜಿ ಸಿಎಂ ಸಿದ್ದರಾಯ್ಯ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಪೊಲೀಸರು ಹಲ್ಲೆ ನಡೆಸಿರುವ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಲ್ಲೆ ಕುರಿತಂತೆ ತನಿಖೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾರ್ಕಳ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಎಂಬುವರಿಗೆ ಕಾರ್ಕಳ ನಗರ ಪೊಲೀಸ್ ಎಸ್‌ಐ ಮಧು ಹಲ್ಲೆ ನಡೆಸಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ.

ವರ್ಷದ ಹಿಂದೆ ಫೇಸ್ ಬುಕ್‍ನಲ್ಲಿ ಯೋಧರ ವಿರುದ್ಧ ರಾಧಾಕೃಷ್ಣ ನಾಯಕ್ ಪೋಸ್ಟ್ ಹಾಕಿರುವುದಾಗಿ ಆರೋಪಿಸಿ ಕಾರ್ಕಳ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆ ದೂರು ನೀಡಿತ್ತು. ವಿಚಾರಣೆಗೆ ಕಾರ್ಕಳ ಪೊಲೀಸರು ಕರೆಸಿಕೊಂಡಿದ್ದಾಗ ನನ್ನ ಅಕೌಂಟ್ ಹ್ಯಾಕ್ ಆಗಿದೆ ಎಂದು ಹೇಳಿ ಬೆಂಗಳೂರಿಗೆ ಹೋಗಿದ್ದರು ಎನ್ನಲಾಗಿದೆ.

ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಿರುವ ಬಗ್ಗೆ, ಬೆಂಗಳೂರಿನಲ್ಲಿ ದೂರು ನೀಡಿರುವುದಾಗಿ ರಾಧಾಕೃಷ್ಣ ಹೇಳಿದ್ದರು. ನಂತರ ಇತ್ತೀಚೆಗೆ ಬೆಂಗಳೂರಿನಿಂದ ವಾಪಸಾಗಿದ್ದ ರಾಧಾಕೃಷ್ಣ ಕಾರ್ಕಳದಲ್ಲಿ ನೆಲೆಸಿದ್ದರು. ಈ ವೇಳೆ ಕಾರ್ಕಳ ಪೊಲೀಸರು ಅವರನ್ನು ತನಿಖೆಗೆ ಬರುವಂತೆ ಸೂಚನೆ ನೀಡಿದ್ದರು. ತನಿಖೆಗೆ ಹಾಜರಾದ ವೇಳೆ ರಾಧಾಕೃಷ್ಣ ಏಕವಚನ ಮತ್ತು ಉಡಾಫೆ ಮಾತುಗಳನ್ನಾಡಿರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಇದೆ.

ಇನ್ನು ಎಸ್ಐ ಮಧು ನಿಂದಿಸಿ, ಹಲ್ಲೆ ನಡೆಸಿದ್ದಾಗಿ ರಾಧಾಕೃಷ್ಣ ದೂರಿದ್ದಾರೆ. ಒಂದು ವರ್ಷದಷ್ಟು ಹಳೆಯ ಪೋಸ್ಟಿಗೆ ಮತ್ತೆ ಠಾಣೆಗೆ ಕರೆಸಿಕೊಂಡು, ಹಲ್ಲೆ ನಡೆಸಿರುವುದರ ಬಗ್ಗೆ ಆರೋಪಿಸಿದ್ದಾರೆ. ಹೃದಯದ ಕಾಯಿಲೆಯಿಂದ ಬಳಲುತ್ತಿರುವ ರಾಧಾಕೃಷ್ಣಗೆ, ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಕಾಂಗ್ರೆಸ್ ನಾಯಕರು ಆಕ್ಷೇಪಿಸಿದ್ದಾರೆ. ಸದ್ಯ ರಾಧಾಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆಯನ್ನುಸಿದ್ದರಾಮಯ್ಯ  ಖಂಡಿಸಿದ್ದು, ಉಡುಪಿ ಎಸ್ಪಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್, ಉಡುಪಿ ಜಿಲ್ಲಾ ಕಾಂಗ್ರೆಸ್ ಈ ಬಗ್ಗೆ ಮುಂದೆ ಹೋರಾಟ ನಡೆಸುವ ಸಾಧ್ಯತೆ ಇದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು