Friday, November 1, 2024
NEWSನಮ್ಮಜಿಲ್ಲೆ

ಮೈಸೂರು- ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಸಿಂಹ, ಸಾರಾ ಕಾರಣ: ಸಿದ್ದರಾಮಯ್ಯ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್ ನ ಸಾ.ರಾ. ಮಹೇಶ್ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಂಸದ ಪ್ರತಾಪ್‌ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದ್ರು, ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ ಎಂದು ಟ್ವೀಟ್‌ ಮೂಲಕ ದೂರಿದ್ದಾರೆ.

ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು ಎಂದಿದ್ದಾರೆ..

ಸರ್ಕಾರ ಸದೃಢವಾಗಿದ್ದರೆ ಅಧಿಕಾರಿಗಳು ಈ ರೀತಿ ಬೇಕಾಬಿಟ್ಟಿ ನಡೆದುಕೊಳ್ಳುತ್ತಿರಲಿಲ್ಲ. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು. ಅದು ತಪ್ಪು. ಇದು ರಾಜಕೀಯ ನಾಯಕತ್ವದ ವೈಫಲ್ಯ ಎಂದು ಹೇಳಿದ್ದಾರೆ.

ಇನ್ನು ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಮಾಡಿದರಷ್ಟೇ ಸಾಲದು ನಿಯಮ ಉಲ್ಲಂಘಿಸಿದ ಇಬ್ಬರು ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...