CrimeNEWSನಮ್ಮಜಿಲ್ಲೆ

ಕೋರ್ಟ್‌ ಆವರಣದಲ್ಲೇ ಹೆಂಡ್ತಿ ಕಾಲ್‌ ಕಟ್‌ಮಾಡಿದ ಸೈನಿಕ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಾನಂದ ಅಡಕಿ ಎಂಬಾತ ಪತ್ನಿ ಜಯಮಾಲಾ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆಕೆಯ ಕಾಲನ್ನೇ ಕತ್ತರಿಸಿದ್ದಾನೆ.

11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಾನಂದ ಮದುವೆಯಾಗಿದ್ದ. ಆದರೆ ಹಣಕಾಸಿನ ವಿಚಾರಕ್ಕೆ ಪತಿ-ಪತ್ನಿಯ ಮಧ್ಯೆ ಕಲಹ ಇತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗಲು ಕೋರ್ಟ್ ಗೆ ಬಂದ ಪತ್ನಿಯ ಮೇಲೆ ಶಿವಪ್ಪ ಅಡಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಲ್ಲಿ ಜಯಮಾಲಾ ತೀವ್ರವಾಗಿ ಗಾಯಗೊಂಡಿದ್ದಾರೆ.

ಹೀಗಾಗಿ, ಆಕೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಆರೋಪಿ ಶಿವಾನಂದ ಅಡಕಿ ಪೊಲೀಸರಿಗೆ ಶರಣಾಗಿದ್ದಾನೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ