NEWSನಮ್ಮಜಿಲ್ಲೆರಾಜಕೀಯ

ಕೆಲವರು ಸಿಎಂ ಆಗುವ ಹಗಲು ಕನಸ್ಸು ಕಾಣುತ್ತಿದ್ದಾರೆ: ರೇಣುಕಾಚಾರ್ಯ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆ ವಿಚಾರ ಇವತ್ತು ನಿನ್ನೆಯದಲ್ಲ ಯಡಿಯೂರಪ್ಪ ನವರು ಸಿಎಂ ಆದ ದಿನದಿಂದಲೂ ಈ ಚರ್ಚೆ ನಡೆಯುತ್ತಲೇ ಬಂದಿದೆ ಈ ಕುರಿತು ಬಿಎಸ್‌ವೈ ಬೆಂಬಲಕ್ಕೆ ನಿಂತು ಸಹಿ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ ನೀಡಿದ್ದು, ಸಹಿ ಸಂಗ್ರಹವನ್ನು ನೀಡುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದರು.

ಯಾರೊ ಮೂರು ಜನ ದೆಹಲಿ ಕದ ತಟ್ಟಿದರೆ ಇಲ್ಲಿ ನಾಯಕತ್ವ ಬದಲಾಗುವುದಿಲ್ಲ. ಕೆಲವರು ಸೂಟು ಹೊಲಿಸಿಕೊಂಡು ಸಿಎಂ ಒಂದು ರೀತಿ ತಿರುಕನ ಮತ್ತು ಹಗಲು ಕನಸು ಕಾಣುತ್ತಿದ್ದಾರೆ. ಆ ಸೂಟನ್ನು ಅವರ ಕ್ಷೇತ್ರದ ಜಾತ್ರೆಯಲ್ಲಿ ಹಾಕಿಕೊಳ್ಳಲಿ. ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ. ನಾಯಕತ್ವ ಬದಲಾವಣೆ ವಿಷಯಕ್ಕೆ ತೆರೆ ಬೀಳಲಿದ್ದು. ಬಿಎಸ್‌ವೈ ವಿರುದ್ಧ ತಂತ್ರಗಾರಿಗೆ ಮಾಡುತ್ತಿರುವವರಿಗೆ ಸ್ಪಷ್ಟ ಸಂದೇಶ ರವಾನಿಸಲಿದ್ದಾರೆ ಎಂದು ಹೇಳಿದರು.

ಕಳೆದ ಎರಡು ಮೂರು ವಾರಗಳಿಂದ ಸಹಿ ಸಂಗ್ರಹ ನಮ್ಮ ಬಿಜೆಪಿ ಸಂಸ್ಕೃತಿಯಲ್ಲ ಎನ್ನುತ್ತಿದ್ದ ಸಚಿವರಾದ ಈಶ್ವರಪ್ಪ, ಆರ್, ಅಶೋಕ್ ಇನ್ನಿತರು ಈಗ ಮೌನಕ್ಕೆ ಜಾರಿದ್ದಾರೆ. ಇನ್ನು ಅರಣ್‌ ಸಿಂಗ್‌ ರಾಜ್ಯಕ್ಕೆ ಆಗಮಿಸಲಿದ್ದು ರಾಜಕೀಯ ಬೆಳವಣಿಗೆ ಯಾವರೀತಿ ತಾರ್ಕಿಕ ಅಂತ್ಯ ಕಾಣುವುದೋ ಕಾದು ನೋಡಬೇಕಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು