Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯಾದ್ಯಂತ ರಸ್ತೆಗಿಳಿಯದ ಸಾರಿಗೆ ಬಸ್‌ಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು:ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಇದರಿಂದ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದ ಬಸ್‌ಗಳಿಲ್ಲದೇ ಬಿಕೋ ಎನ್ನುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ನೀಡಲು ಆಗುತ್ತಿಲ್ಲ ಎಂದು ಪ್ರಯಾಣಿಕರು ಹಿಡಿ ಶಾಪ ಹಾಕುತ್ತಿದ್ದಾರೆ.
ನೌಕರರು ಕರ್ತವ್ಯಕ್ಕೆ ಹಾಜರಾಗದಿರುವುದರಿಂದ ಬಸ್‌ಗಳು ಡಿಪೋಗಳಲ್ಲೇ ಇವೆ. ನಾವು ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೇ ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದು 4 ಸಾರಿಗೆ ನಿಗಮಗಳ ನೌಕರರು ಹೇಳುತ್ತಿದ್ದು, ಅದರಂತೆ ಬಂಸ್‌ನಿಂದ ರಾಜ್ಯ ಸಾರಿಗೆ ಬಸ್‌ಗಳಿಲ್ಲದೆ ಬಿಕೋ ಎನ್ನುತ್ತಿದೆ.

ಬಿಎಂಟಿಸಿಯ ಬನಶಂಕರಿ ಟಿಟಿಎಂಸಿ ಬಸ್‌ ನಿಲ್ದಾಣದ, ಯಶವಂತಪುರ ಟಿಟಿಎಂಸಿ ಸೇರಿದಂತೆ ಬೆಂಗಳೂರಿನ ಯಾವುದೇ ಡಿಪೋಗಳಿಂದ ಬಸ್‌ಗಳು ಸಂಚಾರ ಆರಂಭಿಸಿಲ್ಲ. ಇದರಿಂದ ವಿವಿಧ ಊರುಗಳಿಗೆ ತೆರಳಲು ಮುಂಜಾನೆ 4ಗಂಟೆಗೇ ಬಂದಿರುವ ನೂರಾರು ಪ್ರಯಾಣಿಕರು ಪರದಾಡುವಂತಾಗಿದೆ.

ಜತೆಗೆ ಬೆಂಗಳೂರಿನ ಜೀವನಾಡಿಯಾಗಿರುವ ಬಿಎಂಟಿಸಿ ಬಸ್‌ಗಳಿಲ್ಲದೆ 20 ಲಕ್ಷ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ರಾಜ್ಯಾದ್ಯಂತ 1 ಕೋಟಿಗೂ ಅಧಿಕ ಜನರು ಬಸ್‌ಗಳಿಲ್ಲದೆ ಪರದಾಡುವಂತಾಗಿದೆ.

ನೌಕರರು ಸಾರ್ವಜನಿಕರು ನಮ್ಮ ಹೋರಾಟವನ್ನು ಬೆಂಬಲಿಸಿ ನಿಮಗೆ ತೊಂದರೆಯಾಗುತ್ತಿರುವುದಕ್ಕೆ ಕ್ಷಮೆ ಕೇಳುತ್ತೇವೆ. ಆದರೆ ನಮ್ಮ ಸಮಸ್ಯೆಯನ್ನು ಪರಿಹರಿಸ ಬೇಕಾದ ಸರ್ಕಾರ ಮತ್ತು ಸಚಿವರಿಗೆ ನಿಮ್ಮ ಮತ್ತು ನಮ್ಮ ಕೂಗು ನೋವು ಕೇಳಿಸುತ್ತಿಲ್ಲ. ಈ ಕೂಗು ಅವರಿಗೆ ಮುಟ್ಟಬೇಕಾದರೆ ಈರೀತಿ ನಡೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಪ್ರಯಾಣಿಕ ದೇವರಲ್ಲಿ ಮನವಿ ಮಾಡುತ್ತೇವೆ ಎಂದು ಸಾರಿಗೆ ನೌಕರರು ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ನೀಡಿರುವ ಸಂದೇಶದ ಅನ್ವಯ ಇಂದಿನಿಂದ ಸಾರಿಗೆಯ ನಾಲ್ಕೂ ನಿಗಮದ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನ ಮಾಡಲಾಗಿದೆ ಎಂಬ ಸ್ಪಷ್ಟ ಸಂದೇಶವನ್ನು ನೌಕರರು ಸರ್ಕಾರಕ್ಕೆ ರವಾನಿಸಿದ್ದಾರೆ.

ಇತ್ತ ಸರ್ಕಾರ ಸಾರ್ವಜನಿಕರ ಪರದಾಟಕ್ಕೆ ಸ್ಪಂದಿಸುತ್ತಿಲ್ಲ. ಅಲ್ಲದೆ ಹಸುಗೂಸಿನೊಂದಿಗೆ ಬಸ್‌ ಇಲ್ಲದ ಕಾರಣ ಕೆಂಪೇಗೌಡ ನಿಲ್ದಾಣದಿಂದ ಬನಶಂಕರಿಗೆ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಇನ್ನು ರಜೆ ಇಲ್ಲದ ಕಾರಣ ಸರ್ಕಾರಿ ನೌಕರರ ಕೂಡ ಬಸ್‌ ಇಲ್ಲದೆ ಪರಿತಪ್ಪಿಸುತ್ತಿದ್ದಾರೆ.

Leave a Reply

error: Content is protected !!
LATEST
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌