NEWSನಮ್ಮಜಿಲ್ಲೆರಾಜಕೀಯ

ಕೆಆರ್‌ಎಸ್‌ ಡ್ಯಾಂ ಸೋರದಂತೆ ಸುಮಲತಾರೇ ತಡೆಗೋಡೆಯಾಗಲಿ: ಎಚ್‌ಡಿಕೆ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕೆಆರ್‌ಎಸ್‌ ಡ್ಯಾಂ ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನು ಮಲಗಿಸಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಂಸದೆ ಸುಮಲತಾ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಡ್ಯಾಂ ಬಿರುಕುಬಿಟ್ಟಿದೆ ಎಂದು ಸುಮಲತಾ ಹೇಳಿದ್ದರು ಎಂದು ಸುಮಲತಾ ಹೇಳಿಕೆ ಖಂಡಿಸಿದ ಎಚ್.ಡಿ.ಕುಮಾರಸ್ವಾಮಿ, ಯಾವುದೋ ಅನುಕಂಪದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲಿ. ಸಂಸದರಾಗಿ ಮಂಡ್ಯ ಕ್ಷೇತ್ರದ ಜನರ ಸೇವೆ ಮಾಡಲಿ ಎಂದು ಸಲಹೆ ನೀಡಿದರು.

ಮೊನ್ನೆ ಯಾವುದೋ ಸಭೆಯಲ್ಲಿ ಕೆಆರ್‌ಎಸ್‌ ಇವರೇ ರಕ್ಷಣೆ ಮಾಡುತ್ತಿರುವ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ಕೆಆರ್‌ಎಸ್‌ ಬಾಗಿಲಿಗೆ ನೀರು ಹೋಗದಂತೆ ಅವರನ್ನೇ ಮಲಗಿಸಿಬಿಟ್ರೆ ಬಿಗಿಯಾಗುತ್ತದೆ. ಸಂಸದರು ಕೆಲಸ ಯಾವ ರೀತಿ ಮಾಡಬೇಕು ಅಂತ ಮಾಹಿತಿ ಪಡೆಯಲ್ಲ ಎಂದು ಕಿಡಿಕಾರಿದರು.

ಕಾಟಾಚಾರಕ್ಕೆ ಯಾರ ಮೇಲಿನ ದ್ವೇಷಕ್ಕೋ ಹೇಳಿಕೆ ಕೊಡೋದು ಸರಿಯಲ್ಲ. ಇದು ಬಹಳ ದಿನ ನಡೆಯಲ್ಲ. ಗೆದ್ದ ಮೇಲೆ ಜನರ ಕೆಲಸ ಮಾಡಬೇಕು. ಅನುಕಂಪದ ಅವಕಾಶ ಸದ್ಬಳಕೆ ಮಾಡಿಕೊಳ್ಳದಿದ್ರೆ ಮುಂದೆ ಜನರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...