NEWSನಮ್ಮಜಿಲ್ಲೆರಾಜಕೀಯ

1450 ಎಕರೆ ಭೂಮಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದ ಸಂಬಂಧ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಈ ಮೂರು ಸರ್ವೇ ನಂಬರ್ ಗಳಿಗೆ ಸೇರಿದ ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಭೂ ಮಾಲೀಕರು ನ್ಯಾಯಾಂಗ ನಿಂದನೆ ಅರ್ಜಿ ಹಾಕಿದ್ದರು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೈಸೂರಿನ ಅಂದಿನ ಡಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಹಿರಿಯ ವಕೀಲರೊಬ್ಬರಿಗೆ ದುಬಾರಿ ಶುಲ್ಕ ನೀಡಿ ವಕಾಲತ್ತಿಗೆ ವಹಿಸಲಾಗಿತ್ತು.

3 ಸರ್ವೇ ನಂಬರ್ ಗಳಿಂದ 1450 ಎಕರೆಯಷ್ಟು ಇರೋ ಭೂಮಿ. ಈಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಇದಾಗಿದೆ.

ಇನ್ನು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಮೇಲ್ಮನವಿ ತಿರಸ್ಕರಿಸಿದೆ. ಈ ಮೂಲಕ ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ತೆರೆ ಬಿದ್ದಂತಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...